ಶತಾಯುಷಿ, 114 ವರ್ಷದ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ
ವೃಕ್ಷಮಾತೆ ಇನ್ನೂ ನೆನಪು ಮಾತ್ರ ಶುಕ್ರವಾರ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ಶನಿವಾರ ಬೆಂಗಳೂರಿನ ಜ್ಞಾನಭಾರತಿ ಕಲಾಗ್ರಾಮದಲ್ಲಿ ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ
ಈ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಪೊಲೀಸರು ತಿಮ್ಮಕ್ಕ ಅವರಿಗೆ ವಿಶೇಷ ಗೌರವ ಸಲ್ಲಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ವೃಕ್ಷಮಾತೆಗೆ ಅಂತಿಮ ಗೌರವ ಸಲ್ಲಿಸಿದರು
ಸಾಲು ಮರದ ತಿಮ್ಮಕ್ಕ ರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎರಡು ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತುಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು.
ಅನಕ್ಷರಸ್ಥೆಯಾಗಿದ್ದ ತಿಮ್ಮಕ್ಕನವರು ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಅಪ್ರತಿಮ ಪರಿಸರವಾದಿ.,ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದ್ದರ ಹಿನ್ನೆಲೆ ದೊರೆತಿವೆ.