LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕಮಿಷನ್ ಮಾಫಿಯ ಏಜೆಂಟರ ಮೂಲಕ ನಡೆಯುತ್ತಿದೆ ಸರಕಾರ'- ವಿಜಯೇಂದ್ರ

ಬೆಂಗಳೂರು : ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್‍ಗಳನ್ನು ತೆರೆಯಲಾಗಿದೆ. ಸಚಿವಾಲಯದಿಂದ ಗ್ರಾಮ ಪಂಚಾಯಿತಿ ಕಚೇರಿ ವರೆಗೂ ಲಂಚ ಇಲ್ಲದೆ ಕೆಲಸ ಕಾರ್ಯಗಳು ನಡೆಯುವುದಕ್ಕೆ ಸಾಧ್ಯವಿಲ್ಲ ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರಕಾರ ಕಮಿಷನ್ ಮಾಫಿಯಗೆ ಬೆಂಬಲ ಕೊಡುತ್ತಿದೆ. ಕಮಿಷನ್ ಮಾಫಿಯ ಏಜೆಂಟರ ಮೂಲಕ ರಾಜ್ಯದಲ್ಲಿ ಇವರು ಸರಕಾರದ ಆಡಳಿತ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಏಕೈಕ ಕಾರಣಕ್ಕೆ ಸಿದ್ದರಾಮಯ್ಯನವರು ಇದೆಲ್ಲವನ್ನೂ ನೋಡಿ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿದರು.

ಸಚಿವ ಕೃಷ್ಣಬೈರೇಗೌಡರು ಅಧಿಕಾರಿಗಳ ಸಭೆ ಮುಗಿಸಿ, ‘ಯಾಕ್ರೀ ಹೊಟ್ಟೆ ಉರಿಸ್ತೀರಿ. ನಿಮ್ಮ ರೇಟ್ ಲಿಸ್ಟನ್ನೇ ಹಾಕಿ’ ಎಂದು ಹೇಳಿಕೆ ಕೊಟ್ಟಿದ್ದಾರೆ. ಗೃಹ ಸಚಿವ ಪರಮೇಶ್ವರ್ ಅವರು ಬಾದಾಮಿಯಲ್ಲಿ ಈಗಷ್ಟೇ ಹೇಳಿಕೆ ನೀಡಿ, ‘ಸಿದ್ರಾಮಣ್ಣ ಅವರ ಹತ್ರ ಕಾಸಿಲ್ಲ; ದಯವಿಟ್ಟು ಹಣ ಕೇಳಲು ಬರಬೇಡಿ’ ಎಂದಿದ್ದಾಗಿ ತಿಳಿಸಿದರು.

ಬೊಕ್ಕಸದಲ್ಲಿ ಹಣ ಇಲ್ಲ ಎಂಬ ಸಂದೇಶವನ್ನು ರಾಜ್ಯದ ಮುಖ್ಯಮಂತ್ರಿಗಳು ಗೃಹ ಸಚಿವರ ಮೂಲಕ ಕಾಂಗ್ರೆಸ್ ಶಾಸಕರಿಗೆ ತಿಳಿಸಿದಂತಿದೆ; ಶಾಸಕರು ಅನುದಾನ ಕೇಳಬೇಡಿ ಎಂದಿರುವಂತಿದೆ ಎಂದು ಹೇಳಿದರು.

ಆಡಳಿತದಲ್ಲಿ ಹಿಡಿತ ಕಳಕೊಂಡ ಮುಖ್ಯಮಂತ್ರಿ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ದಾಖಲೆ ಮುರಿಯಬೇಕು. ಇವರು ದೇವರಾಜ ಅರಸು ಅವರ ದಾಖಲೆ ಮುರಿಯುವುದಕ್ಕೋಸ್ಕರ ರಾಜ್ಯವನ್ನು ಲೂಟಿ ಮಾಡಿ, ಯಾವುದೇ ಅಭಿವೃದ್ಧಿ ಕಾರ್ಯಗಳು ಇಲ್ಲದೇ, ಲಂಚ ಇಲ್ಲದೇ ಯಾವುದೇ ಕೆಲಸ ಕಾರ್ಯ ಆಗುತ್ತಿಲ್ಲವೆಂದಾದರೆ ಈ ರಾಜ್ಯದಲ್ಲಿ ಮುಖ್ಯಮಂತ್ರಿಗಳು ತಮ್ಮ ಸಂಪೂರ್ಣ ಹಿಡಿತವನ್ನು ಕಳೆದುಕೊಂಡಿದ್ದಾರೆ ಎಂದು ವಿಜಯೇಂದ್ರ ಅವರು ಟೀಕಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026