Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸ್ವಾಮೀಜಿಗೂ ಬಡ್ತಿ ನೀಡಿದ ಸರ್ಕಾರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಡ್ತಿ ನೀಡಿರುವ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬಡ್ತಿ ಪಟ್ಟಿಯಲ್ಲಿ ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯ ದೀಕ್ಷೆ ಪಡೆದಿರುವ ಹೆಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿರುವುದು ಗಂಭೀರ ಆಡಳಿತಾತ್ಮಕ ಎಡವಟ್ಟೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.


ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ನಿಮ್ಮ ಕಾಂಗ್ರೆಸ್ ಸರ್ಕಾರದ ಅದಕ್ಷತೆ, ಅಸಮರ್ಥತೆ ಈಗ ಯಾವ ಮಟ್ಟಕ್ಕೆ ತಲುಪಿದೆ ಗೊತ್ತಾ? ಎಂದು ಟೀಕಿಸಿದ್ದಾರೆ.

ಹೆಚ್.ಎಲ್. ನಾಗರಾಜ್ ಅವರು ಸೇವೆಯಿಂದ ನಿವೃತ್ತರಾಗಿ ನಂತರ ಸನ್ಯಾಸತ್ವ ಸ್ವೀಕರಿಸಿ ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಆಧ್ಯಾತ್ಮಿಕ ಜೀವನ ನಡೆಸುತ್ತಿರುವುದು ತಿಳಿದಿದ್ದರೂ, ಅವರ ಹೆಸರನ್ನು ಸೇವೆಯಲ್ಲಿರುವ ಅಧಿಕಾರಿಗಳ ಪಟ್ಟಿಯಲ್ಲಿ ಸೇರಿಸಿ ಪದೋನ್ನತಿ ನೀಡಲಾಗಿದೆ ಎಂದು ಅಶೋಕ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.
ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ!-


ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ.

ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಕಾಂಗ್ರೆಸ್ ಸರ್ಕಾರದ ಅದಕ್ಷತೆ, ಅಸಮರ್ಥತೆ ಈಗ ಯಾವ ಮಟ್ಟಕ್ಕೆ ತಲುಪಿದೆ ಗೊತ್ತಾ? ಸೇವೆಯಿಂದ ಸ್ವಯಂನಿವೃತ್ತರಾಗಿ ಕಾವಿ ಧರಿಸಿ ಪೀಠಾಧಿಪತಿಯಾಗಿರುವವರಿಗೂ ಬಡ್ತಿ ಭಾಗ್ಯನೀಡುವ ಮಟ್ಟಕ್ಕೆ! ಹೋಗಿದೆ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಒಬ್ಬ ಅಧಿಕಾರಿ ಸೇವೆಯಿಂದ ನಿವೃತ್ತರಾಗಿ, ಸನ್ಯಾಸತ್ವ ಸ್ವೀಕರಿಸಿ, ಆಧ್ಯಾತ್ಮಿಕ ಜೀವನ ನಡೆಸುತ್ತಿದ್ದರೂ, ನಿಮ್ಮ ಸರ್ಕಾರದ ದಾಖಲೆಗಳಲ್ಲಿ ಅವರು ಇನ್ನೂ ಸೇವೆಯಲ್ಲಿರುವ ಅಧಿಕಾರಿ”!.

ನಿಮ್ಮ ಘನಂದಾರಿ ಆಡಳಿತದಲ್ಲಿ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳು ಸಹಿ ಮಾಡುವ ಮುನ್ನ ಫೈಲುಗಳನ್ನು ಓದುತ್ತಾರೋ ಕಣ್ಣು ಮುಚ್ಚಿಕೊಂಡು ಸಹಿ ಹಾಕುತ್ತಾರೋ? ಎಂದು ಟೀಕಿಸಿದರು.

ನಿಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಯಾವ ಅಧಿಕಾರಿಗಳು ಸೇವೆಯಲ್ಲಿ ಇದ್ದಾರೆ, ಯಾರು ನಿವೃತ್ತರಾಗಿದ್ದಾರೆ ಅನ್ನುವ ಕನಿಷ್ಠ ಮಾಹಿತಿಯೂ ಗೊತ್ತಿಲ್ಲದಿದ್ದರೆ, ರಾಜ್ಯದ ಜನತೆ ಆಡಳಿತ ಮತ್ತು ಅಭಿವೃದ್ಧಿ ವಿಚಾರದಲ್ಲಿ ನಿಮ್ಮ ಸರ್ಕಾರದ ಮೇಲೆ ಹೇಗೆ ವಿಶ್ವಾಸ ಇಡಬೇಕು ಸ್ವಾಮಿ?

ಇವತ್ತು ನಿವೃತ್ತರಾಗಿರುವ ಅಧಿಕಾರಿಯೊಬ್ಬರಿಗೆ ಬಡ್ತಿ ನೀಡಿದ್ದೀರಿ, ನಾಳೆ ನಿಧನ ಹೊಂದಿರುವ ಅಧಿಕಾರಿಗೆ ವರ್ಗಾವಣೆ ಆದೇಶ ಹೊರಡಿಸಿದರೂ ಆಶ್ಚರ್ಯವಿಲ್ಲ! ಎಂದು ವ್ಯಂಗ್ಯವಾಡಿದರು. ಇದು ಕೇವಲ ಒಂದು ಆಕಸ್ಮಿಕ ಯಡವಟ್ಟು ಅಲ್ಲ. ಇದು ಆಡಳಿತ ವ್ಯವಸ್ಥೆಯ ಸಂಪೂರ್ಣ ಕುಸಿತದ ಸೂಚನೆ.

ದಿನಕ್ಕೊಂದು ಎಡವಟ್ಟು, ಕ್ಷಣಕ್ಕೊಂದು ಮುಖಭಂಗ. ಇನ್ನೆಷ್ಟು ದಿನ ಸ್ವಾಮಿ ಈ ಎಡವಟ್ಟು ಸರ್ಕಾರಕ್ಕೆ ಎಡವಟ್ಟು ಮುಖ್ಯಮಂತ್ರಿ ಆಗಿ ತಮ್ಮ ಗೌರವ ಕಳೆದುಕೊಳ್ಳುತ್ತೀರಿ. ಸಾಕು ಮಾಡಿ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕದ ಗೌರವ ಉಳಿಸಿ, ತಮ್ಮ ಇರೋಬರೋ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ