LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರು

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿ, ಹಲವು ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ ಎಂದು ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಸುಗ್ರೀವಾಜ್ಞೆಯಲ್ಲಿ ಹಲವು ಲೋಪದೋಷಗಳನ್ನ ಗುರುತಿಸಿರುವ ರಾಜ್ಯಪಾಲರು, "ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ ಹೇಗೆ ಹಾಕುತ್ತೀರಾ" ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಮುಂದುವರೆದು "ಸಾಲ ಪಡೆಯುವವನ ಬಳಿ ಏನೂ ದಾಖಲೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದೀರಾ, ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆಯಾಗಲಿದೆ. ಬಜೆಟ್ ಅಧಿವೇಶನದಲ್ಲಿ ಸಾದಕ-ಬಾಧಕ ಚರ್ಚಿಸಿ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರುವುದರಿಂದ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ" ಎಂದು ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚಿಸಿ ಕಳುಹಿಸಿ ಎಂದು ರಾಜ್ಯಪಾಲರು ಸುಗ್ರೀವಾಜ್ಞೆ ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೇ ಇರುವುದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ರಾಜ್ಯ ಸರ್ಕಾರ ಇದೀಗ ಸುಗ್ರೀವಾಜ್ಞೆ ಕರಡು ಬಿಲ್ ಪರಿಷ್ಕರಣೆ ಮಾಡಿ ಮಸೂದೆ ತರಬೇಕಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಸಿ ಎಸ್ ಪಿ, ಟಿಎಸ್ ಪಿ ಹಣ: ಇಬ್ಬರ ಸಚಿವರ ವಾಕ್ ಸಮರ.!ಮದುವೆಗೆ ತೆರಳುತ್ತಿದ್ದ ವಾಹನ ಬಿಸಿಲೆ ಘಾಟ್ ತಿರುವಿನಲ್ಲಿ ಪಲ್ಟಿ: 20ಕ್ಕೂ ಅಧಿಕ ಮಂದಿಗೆ ಗಾಯನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲುಸಲ್ಮಾನ್ ಖಾನ್ ವಿರುದ್ಧದ ‘ಭಯೋತ್ಪಾದಕ’ ವದಂತಿ ಸುಳ್ಳು - ಪಾಕಿಸ್ತಾನ ಸರ್ಕಾರದ ಅಧಿಕೃತ ಸ್ಪಷ್ಟನೆ!ಆಭರಣ ಪ್ರಿಯರು ಫುಲ್​ ಖುಷ್… ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ‘ಮೊಂಥಾ’ ಚಂಡಮಾರುತ - ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು‘ಭಾರತದಲ್ಲಿ ಸ್ವತಂತ್ರವಾಗಿ ಧೈರ್ಯದಿಂದ ಬದುಕುತ್ತಿದ್ದೇನೆ., ಬಾಂಗ್ಲಾದೇಶಕ್ಕೆ ಬರಲ್ಲ” – ಶೇಖ್ ಹಸೀನಾ7565 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಿ ಅರ್ಜಿಐಎಎಸ್‌ ತಹಸಿನ್ ಬಾನು ದವಡಿ ಸ್ಪೂರ್ತಿದಾಯಕ ಕಥನಮಾಟಮಂತ್ರದ ಅಪಾಯ ಹೆಚ್ಚು! ತಪ್ಪದೇ ಪಾಲಿಸಬೇಕಾದ 7 ನಿಯಮಗಳಿವು