LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು: ಮೈಕ್ರೋ ಫೈನಾನ್ಸ್ ತಡೆಗಾಗಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿತ್ತು. ಆದರೆ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಕೆಲವು ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಹರಿಸಿದೆ. ಆದರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸ್ತಿಲ್ಲ ಇದು ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಅಲ್ಲದೆ ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ.

ನೀವು ಐದು ಲಕ್ಷ ದಂಡ‌ ಹೇಗೆ ಹಾಕುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ ರಾಜ್ಯಪಾಲರು. ಇನ್ನು ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಾ ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ ಆದ್ರೆ ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ.ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ.

ಬಜೆಟ್ ಅಧಿವೇಶನದ ಹತ್ತಿರವಾಗ್ತಿರುವಾಗ ಸದನದಲ್ಲಿ ಸಾದಕಬಾಧಕ ಚರ್ಚಿಸಿ, ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ತಿಲ್ಲ, ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣ್ತಿಲ್ಲ ಎಂದು ಸುಗ್ರೀವಾಜ್ಞೆಯನ್ನ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಲವ್ ಜಿಹಾದ್ ಆರೋಪಿ ಅರೆಸ್ಟ್ಪ್ರಧಾನಿ ಮೋದಿ ವಿರುದ್ಧ ಹತ್ಯೆ ಸಂಚು? - ವೈರಲ್ ಆಗುತ್ತಿರುವ ನಿಗೂಢ ವರದಿಗಳು!ಐಎಎಸ್ ಆಯುಷಿ ದಬಾಸ್ ಯಶಸ್ಸಿನ ಕಥನನಿಮ್ಮ ಏಳಿಗೆ ಪ್ರಗತಿ ಸಹಿಸದ ಶತ್ರುಗಳಿಗೆ ಅಷ್ಟಮಂಡಲ ಹಾಕುವ ಕಪ್ಪು ಕವಡೆಗಳಿಂದ ಶತ್ರುನಾಶ ಸರಳ ತಂತ್ರ ಮಾಡಬಹುದು!ಕೆ.ಎಲ್.ಇ. ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ.!ಡಿಸೆಂಬರ್ ಅಥವಾ ಮಾರ್ಚ್‍ನಲ್ಲಿ ರಾಷ್ಟ್ರಮಟ್ಟದ: ಖೋ ಖೋ ಪಂದ್ಯಾವಳಿ: ದಿನೇಶ್ ಕೆ.ಶೆಟ್ಟಿವಚನ.: -ನಗೆಯ ಮಾರಿತಂದೆಪ್ರಚೋದನಕಾರಿ ಹೇಳಿಕೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್.!ಮಂಗಳೂರು: ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರ ರಕ್ಷಣೆ