LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ

ಚಾಮರಾಜನಗರ: ಮದುವೆ ಮಂಟಪಕ್ಕೆ ಹೋಗುತ್ತಿರುವಾಗಲೇ ವರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲೂಕಿನ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾಗಿರುವ ವರ.

ಎಲ್. ರವೀಶ್​ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್​ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುವಾಗ ಕೊಳ್ಳೇಗಾಲದ ಎಂಜಿಎಸ್​ವಿ ಕಾಲೇಜು ರಸ್ತೆಯ ಬಳಿ ವರ ತೆರಳುತ್ತಿದ್ದ ಕಾರನ್ನು ಹಿಂಬಾಲಿಸಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಎಲ್. ರವೀಶ್ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದು, ಎಡಗೈ ತೊಳಿಗೆ ಚಾಕು ಇರಿದು ರಕ್ತಸ್ರಾವವಾಗಿದೆ.



ಸದ್ಯ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ರವೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. 6 ತಿಂಗಳ ಹಿಂದೆ ಹೊಸಅಣಗಳ್ಳಿ ಗ್ರಾಮದ ಯುವತಿಯ ಜೊತೆ ಎಂಗೇಜ್ಮೆಂಟ್ ಆಗಿತ್ತು. ಜ.30 ರಂದು ಮದುವೆ ನಿಶ್ಚಯವಾಗಿದ್ದರಿಂದ ಕಾರಿನಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುವಾಗ ಹಿಂಬದಿಯಿಂದ ಮತ್ತೊಂದು ಕಾರಿನಲ್ಲಿ ಬಂದವರು ಚಾಕುವಿನಿಂದ ಹಲ್ಲೆ ಮಾಡಿದರು. ಹಲ್ಲೆ ನಡೆಸಿದವರು ಯಾರೆಂದು ಗೊತ್ತಿಲ್ಲ ಎಂದು ರವೀಶ್‌ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026