LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆಯ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ (ಮಾ.18) ಎತ್ತಿ ಹಿಡಿದಿದೆ.

ಸುಗ್ರೀವಾಜ್ಞೆಯ ಸಿಂಧುತ್ವ ಪ್ರಶ್ನಿಸಿ ಹಾಗೂ ಮೋಟಾರು ವಾಹನ/ಆಸ್ತಿಗೆ ಹಣಕಾಸು ಸೌಲಭ್ಯ ಒದಗಿಸುವ ಉದ್ಯಮವು ಸುಗ್ರೀವಾಜ್ಞೆಯಿಂದ ಹೊರಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲು ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಕರ್ನಾಟಕ ಹೈರ್‌ ಪರ್ಚೇಸ್‌ ಅಸೋಶಿಯೇಶನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಉದಯ್‌ ಹೊಳ್ಳ ಅವರು “ಸಂಕಷ್ಟದಲ್ಲಿರುವ ಕುಟುಂಬಗಳನ್ನು ರಕ್ಷಿಸುವ ಉದ್ದೇಶ ಸರ್ಕಾರದ್ದಾಗಿದ್ದರೆ ಸಾಲ ನೀಡುವವರು, ಸಂಸ್ಥೆಗಳು ಮತ್ತು ಸಂಘಗಳನ್ನು ಏಕೆ ಸೇರಿಸಲಾಗಿದೆ. ಸುಗ್ರೀವಾಜ್ಞೆಯಲ್ಲಿ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ. ವಿವೇಚನಾರಹಿತವಾಗಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಆರ್‌ಬಿಐ ನಿರ್ದೇಶನ ಪಾಲಿಸಲಾಗಿದೆ ಎಂದು ಸರ್ಕಾರ ಹೇಳುತ್ತದೆ. ಆದರೆ, ಆರ್‌ಬಿಐ ನಿರ್ದೇಶನವು ನಿಯಮ ಅಥವಾ ಶಾಸನವಲ್ಲ. ನಾವು ಖರೀದಿ ಉದ್ಯಮದಲ್ಲಿದ್ದು, ವಾಹನಗಳನ್ನೇ ಭದ್ರತೆಯನ್ನಾಗಿ ಇಟ್ಟುಕೊಳ್ಳುತ್ತೇವೆ. ಸುಗ್ರೀವಾಜ್ಞೆಯ ಸೆಕ್ಷನ್‌ 6 ಬಾಧಕವಾಗಿದೆ” ಎಂದು ವಾದಿಸಿದ್ದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಮೂರು ಲಕ್ಷ ವಾರ್ಷಿಕ ಆದಾಯ ಇರುವ ಕುಟುಂಬಗಳಿಗೆ ಯಾವುದೇ ಭದ್ರತೆ ಇಲ್ಲದೆ ಸಾಲ ನೀಡುವವರಿಗೆ ಸುಗ್ರೀವಾಜ್ಞೆ ಅನ್ವಯಿಸುತ್ತದೆ. ಹಾಲಿ ಪ್ರಕರಣದಲ್ಲಿ ಬಾದಿತರಾರೂ ನ್ಯಾಯಾಲಯದ ಮುಂದೆ ಬಂದಿಲ್ಲ. ಅರ್ಜಿದಾರರು ಕಾಯ್ದೆ ತಮಗೆ ಅನ್ವಯಿಸುತ್ತದೆಯೇ ಇಲ್ಲವೇ ಎಂಬುದರ ಸ್ಪಷ್ಟನೆ ಕೋರಲು ನ್ಯಾಯಾಲಯ ಮುಂದೆ ಬಂದಿದ್ದಾರೆ. ಆರ್‌ಬಿಐ ಸುತ್ತೋಲೆ ಏನು ಹೇಳುತ್ತದೆ ಅದನ್ನು ಮಾಡಲಾಗಿದೆ. ಅರ್ಜಿದಾರರಿಗೂ ಸುಗ್ರೀವಾಜ್ಞೆಗೂ ಯಾವುದೇ ಸಂಬಂಧವಿಲ್ಲ. ಸಾಲದಾತರ ಕಿರುಕುಳದಿಂದಾಗಿ 17 ಮಂದಿ ಸಾವನ್ನಪ್ಪಿದ್ದಾರೆ. ಆ ಸಂಬಂಧ ಎಫ್‌ಐಆರ್‌ ದಾಖಲಾಗಿವೆಯಷ್ಟೆ. ಬೇರೆ ಯಾವುದೇ ತೆರನಾದ ಎಫ್‌ಐಆರ್‌ ದಾಖಲಿಸಲಾಗಿಲ್ಲ. ಎನ್‌ಬಿಎಫ್‌ಸಿ ಮತ್ತು ಆರ್‌ಬಿಐ ಕಾಯ್ದೆ ವ್ಯಾಪ್ತಿಯಿಂದ ಹೊರಗಿರುವವರಿಗೆ ಸುಗ್ರೀವಾಜ್ಞೆ ಅನ್ವಯಿಸುತ್ತದೆ” ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಮಹಾರಾಷ್ಟ್ರದ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ!ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ!'ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡದಿದ್ದರೆ ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು'- ಸುಪ್ರೀಂಐಎಎಸ್ ಅಧಿಕಾರಿ ತೃಪ್ತಿ ಕಲ್ಹಾನ್ಸ್ ಸ್ಫೂರ್ತಿದಾಯಕ ಕಥೆದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 31-01-2026.!ದಾವಣಗೆರೆ ವಿವಿ 13 ನೇ ಘಟಿಕೋತ್ಸವ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಹೇಳಿದ್ದು.!ಇಂದಿನ ವಚನ:-ಜೇಡರ ದಾಸಿಮಯ್ಯಅವರ ವಚನ..!ಲ್ಯಾಂಡ್ ಲಾರ್ಡ್‌ ಭರವಸೆ ಮೂಡಿಸುವ ಸಿನಿಮಾ.!ಹೊಸದುರ್ಗ: ಫೆ.6 ರಿಂದ ಕುಂದೂರು ಗೊಲ್ಲರಹಟ್ಟಿಯಲ್ಲಿ ಶ್ರೀ ವೆಂಕಟೇಶ್ವರಸ್ವಾಮಿಯ ನೂತನ ಆಲಯ ಕಳಶಾರೋಹಣ.!ನಾಳೆ ಫೆ.01ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ