LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳು

ಬೆಂಗಳೂರು :ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ (Microfinance) ಹಾವಳಿಗೆ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಮನೆ, ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆದರೆ ಇದೀಗ ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ನಿನ್ನೆ ಅಂಕಿತ ಹಾಕಿದ್ದಾರೆ.

ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:-

1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ.

2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.

3. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.

4. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.

5. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.

6. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಆಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.

7. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.

8. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾ ವಾಸದೊಂದಿಗೆ ಅಥವಾ ರೂ.10,000/- ಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.

9. ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.

10. ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.

11. ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. 5 ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.

12. ಪೋಲೀಸ್‌ ಉಪ ಅಧೀಕ್ಷಕರ (Dy SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suo moto) ಪ್ರಕರಣವನ್ನು ದಾಖಲಿಸಬಹುದು.

13. ಸರ್ಕಾರವು ಕಾಲಕಾಲಕ್ಕೆ ಈ ಆಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.

14. ಈ ಆಧ್ಯಾದೇಶದಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಳೆದ ತಿಂಗಳು ಗುಜರಿ ಮಾರಿ 800 ಕೋಟಿ ರೂಪಾಯಿ ಗಳಿಸಿದ ಕೇಂದ್ರ!ರಾತ್ರಿ ಮಲಗುವ ಮುನ್ನ ಇದನ್ನ ಮುಖಕ್ಕೆ ಹಚ್ಚಿದರೆ 10 ವರ್ಷ ವಯಸ್ಸು ಕಡಿಮೆಯಾಗುತ್ತೆಆತ್ಮಗಳು ಎಲ್ಲಿ ವಾಸವಾಗಿರುತ್ತದೆ ಹಾಗೂ ಯಾರಿಗೆ ತೊಂದರೆ ಕೊಡುತ್ತದೆ ಎಂಬುದು ತಿಳಿದಿದೆಯೇ ನಿಮಗೆ ?ಹಿರೆಮದಕರಿನಾಯಕರ ಧರ್ಮಪತ್ನಿ ಗಂಡೋಬಳವ್ವ ನಾಗತಿ ಅವರ ಚಿತ್ರ ಅನಾವರಣ.!ವಚನ.: -ಕನ್ನಡಿಕಾಯಕದ ಅಮ್ಮಿದೇವಯ್ಯRSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್