LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭ ರದ್ದು

ಇಸ್ಲಮಾಬಾದ್ : ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲು ಕೇವಲ 3 ವಾರಗಳು ಮಾತ್ರ ಉಳಿದಿದ್ದು, ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ಪಾಕಿಸ್ತಾನಿ ಮಂಡಳಿ(ಪಿಸಿಬಿ) ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

ಉದ್ಘಾಟನಾ ಸಮಾರಂಭ ರದ್ದಾಗುವ ಜೊತೆಗೆ ಟೂರ್ನಿಗೂ ಮುನ್ನ ಯಾವುದೇ ಪತ್ರಿಕಾಗೋಷ್ಠಿ ಹಾಗೂ ನಾಯಕರ ಅಧಿಕೃತ ಫೋಟೋಶೂಟ್ ಇರುವುದಿಲ್ಲ ಎಂದು ವರದಿಯಾಗಿದೆ. ಹಾಗೂ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಈ ಉಭಯ ತಂಡಗಳು ನಿಗದಿತ ಸಮಯಕ್ಕೆ ಪಾಕಿಸ್ತಾನ ತಲುಪಲು ಸಾಧ್ಯವಾಗದಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.

ಪ್ರಸ್ತುತ ಶ್ರೀಲಂಕಾ ಮತ್ತು ಭಾರತದಲ್ಲಿ ವಿಭಿನ್ನ ಸರಣಿಗಳಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಆಡುತ್ತಿದೆ. ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು, ಇದರಲ್ಲಿ ಚಾಂಪಿಯನ್ಸ್ ಟ್ರೋಫಿ ತಂಡದ ಕೆಲ ಆಟಗಾರರು ಕೂಡ ಇದ್ದಾರೆ. ಇದರೊಂದಿಗೆ ಇಂಗ್ಲೆಂಡ್ ತಂಡವೂ ಪ್ರಸ್ತುತ ಭಾರತದಲ್ಲಿ ಟಿ20 ಸರಣಿಯನ್ನು ಆಡುತ್ತಿದ್ದು, ಆ ಬಳಿಕ ಏಕದಿನ ಸರಣಿಯನ್ನು ಕೂಡ ಆಡಲಿದೆ.

ಉದ್ಘಾಟನಾ ಸಮಾರಂಭ ಮಾತ್ರವಲ್ಲ, ಪ್ರತಿ ಐಸಿಸಿ ಕಾರ್ಯಕ್ರಮಕ್ಕೂ ಮುನ್ನ ಎಲ್ಲಾ ತಂಡಗಳ ನಾಯಕರ ಪತ್ರಿಕಾಗೋಷ್ಠಿಯೂ ಇರುತ್ತದೆ. ನಂತರ ನಾಯಕರು ಪಂದ್ಯಾವಳಿಯ ಟ್ರೋಫಿಯೊಂದಿಗೆ ಫೋಟೋಶೂಟ್ ಕೂಡ ಮಾಡುತ್ತಾರೆ. ಆದರೆ ಈಗ ಈ ಎಲ್ಲವೂ ರದ್ದಾಗುವ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಲ್ಮಾನ್ ಖಾನ್ ವಿರುದ್ಧದ ‘ಭಯೋತ್ಪಾದಕ’ ವದಂತಿ ಸುಳ್ಳು - ಪಾಕಿಸ್ತಾನ ಸರ್ಕಾರದ ಅಧಿಕೃತ ಸ್ಪಷ್ಟನೆ!ಆಭರಣ ಪ್ರಿಯರು ಫುಲ್​ ಖುಷ್… ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ‘ಮೊಂಥಾ’ ಚಂಡಮಾರುತ - ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು‘ಭಾರತದಲ್ಲಿ ಸ್ವತಂತ್ರವಾಗಿ ಧೈರ್ಯದಿಂದ ಬದುಕುತ್ತಿದ್ದೇನೆ., ಬಾಂಗ್ಲಾದೇಶಕ್ಕೆ ಬರಲ್ಲ” – ಶೇಖ್ ಹಸೀನಾ7565 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಿ ಅರ್ಜಿಐಎಎಸ್‌ ತಹಸಿನ್ ಬಾನು ದವಡಿ ಸ್ಪೂರ್ತಿದಾಯಕ ಕಥನಮಾಟಮಂತ್ರದ ಅಪಾಯ ಹೆಚ್ಚು! ತಪ್ಪದೇ ಪಾಲಿಸಬೇಕಾದ 7 ನಿಯಮಗಳಿವುಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಪೊಲೀಸರ ಬಲೆಗೆ.!ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್.!ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ : ಅರ್ಜಿ ಆಹ್ವಾನ