LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೇ 29 ರಿಂದ ಮದ್ಯದಂಗಡಿ ಬಂದ್..!

ಬೆಂಗಳೂರು: ನಿರಂತರ ದರ ಏರಿಕೆ  ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಈ ತಿಂಗಳು 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ. ಈಗಾಗಲೇ ‌ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಮೇಲೆ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ. ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್‌ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಕರುಣಾಕರ್ ಹೆಗ್ಡೆ ತಿಳಿಸಿದ್ದಾರೆ.

ಲೈಸೆನ್ಸ್ ದರ ಎಷ್ಟಿದೆ? ಹೆಚ್ಚಳದ ಬಳಿಕ ಎಷ್ಟಾಗಲಿದೆ?

CL9 ಬಾರ್ ಆ್ಯಂಡ್‌ ರೆಸ್ಟೋರೆಂಟ್​ಗೆ ಈ ಮೊದಲು ಲೈಸೆನ್ಸ್ ಶುಲ್ಕ 8,62,000 ರೂ. ಇತ್ತು. ಈಗ ಅದನ್ನು 15,00,000 ರೂ.ಗೆ ಹೆಚ್ಚಿಸಲಾಗಿದೆ. ಸೆಸ್ 2,25,000 ರೂ. ಸೇರಿ ಒಟ್ಟು ಒಟ್ಟು 17,25,000 ರೂ. ಆಗಲಿದೆ.

CL 6A ಸ್ಟಾರ್ ಹೋಟೆಲ್ ಲೈಸೆನ್ಸ್ ಶುಲ್ಕ 9,75,000 ರೂ. ಇದ್ದಿದ್ದು ಈಗ 20 ಲಕ್ಷ ರೂ. ಮಾಡಲಾಗಿದೆ. ಇದಕ್ಕೆ ಸೆಸ್ 3 ಲಕ್ಷ ರೂ. ಸೇರಿ ಒಟ್ಟು 23 ಲಕ್ಷ ರೂ. ಆಗಲಿದೆ.

L 7 ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್ ಲೈಸೆನ್ಸ್ ಶುಲ್ಕ 9,75,000 ರೂ. ಇದ್ದದ್ದು ಈಗ 17,00,000 ರೂ.ಗೆ ಏರಿಕೆಯಾಗಿದೆ. ಸೆಸ್ 2,55,000 ರೂ. ಸೇರಿ ಒಟ್ಟು 19,550,00 ರೂ. ಆಗಲಿದೆ.

26 ರಂದು ಮದ್ಯ ಮಾರಾಟಗಾರರ ಸಂಘದ ಜೊತೆಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವೇಳೆ ಮದ್ಯ ಮಾರಾಟಗಾರರ ಬೇಡಿಕೆಗಳನ್ನು ಈಡೇರಿಸಲಿಲ್ಲ ಅಂದರೆ 29 ರಿಂದ ನಿರಂತರವಾಗಿ ಮದ್ಯದ ಅಂಗಡಿಗಳನ್ನು ಕ್ಲೋಸ್ ಮಾಡಲು ರಾಜ್ಯ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.

ಈ ಬಗ್ಗೆ ಮದ್ಯಪ್ರಿಯರು ಪ್ರತಿಕ್ರಿಯಿಸಿದ್ದು, ಮೊದಲು ಮದ್ಯ ಮತ್ತು ಲೈಸೆನ್ಸ್ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ನಿರಂತರವಾಗಿ ಮದ್ಯದ ದರ ಏರಿಕೆ ಮಾಡುವುದು ಮತ್ತು ಮದ್ಯ ಮಾರಾಟದ ಲೈಸೆನ್ಸ್ ದರ ಏರಿಕೆ ಖಂಡಿಸಿ ರಾಜ್ಯ ಮದ್ಯ ಮಾರಾಟಗಾರರು ಬಂದ್​ಗೆ ಪ್ಲಾನ್ ಮಾಡುತ್ತಿದ್ದು, ಇದಕ್ಕೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಚೆನ್ನಬಸವಣ್ಣ .!ಕಾಂಗ್ರೆಸ್ ಮತ್ತು ಬಿಜೆಪಿ. ಪಕ್ಷಗಳನ್ನು ಸೋಲಿಸಿ ಕಾರ್ಮಿಕರ ಪಕ್ಷಗಳು ಅಧಿಕಾರಕ್ಕೆ ಬರಬೇಕಿದೆ.!ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಬಾಷೆಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದಕ್ಕೆ ಕಾರಣ .?ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯರು ಹೇಳಿದ್ದು ಹೀಗೆ .! ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ನಲ್ಲಿಯೇ ನೇಣು..!ಯುದ್ಧ ಮತ್ತು ಸಂಘರ್ಷಗಳ ನಡುವೆ ಬುದ್ಧನ ಸಂದೇಶ ದಾರಿ ದೀಪ: ಶಾಸಕ ಕೆ.ಸಿ.ವೀರೇಂದ್ರರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲ್ಲಿಗೆ ಭತ್ತದ ತಳಿ ಅಭಿವೃದ್ಧಿ ಪಡಿಸಿದ ಎಂ. ಲಿಂಗಮಾದಯ್ಯ ಇನ್ನಿಲ್ಲ.!ಸಿಎಂ ಬದಲಾವಣೆ ಬಗ್ಗೆ  AICC ಅಧ್ಯಕ್ಷ ಖರ್ಗೆ ಹೇಳಿದ್ದೇನು.?ಈ ಮರದ ಬೇರಿಗೆ ಬಟ್ಟೆಯನ್ನು ಸುತ್ತಿ ಮನೆಯೊಳಗೆ ಇರಿಸಿ. ನಿಮ್ಮ ಮನೆಗೆ ಹಣದ ಹರಿವು ಹೆಚ್ಚಾಗುತ್ತದೆ.!ಕಾರ್ಮಿಕರ ಮಕ್ಕಳಿಗೆ ಉಚಿತ 1ರಿಂದ 12 ತರಗತಿವರೆಗೆ ಪುಸ್ತಕ ಉಚಿತ ಕಿಟ್.!