LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೇಗವರ್ಧಿತ ಎಲೆಕ್ಟ್ರಿಕ್ ವಾಹನ (ಇವಿ) ಪರಿವರ್ತನೆಗೆ ಕೇಂದ್ರ ಸರಕಾರ ಬದ್ಧ ಎಂದ ಸಚಿವರು

ನವದೆಹಲಿ: ರಾಷ್ಟ್ರದ ಭೂಸಾರಿಗೆ ವಲಯದಲ್ಲಿ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಸಿ ವಿದ್ಯುತ್ ಚಾಲಿತ ವಾಹನಗಳನ್ನು ಹೆಚ್ಚು ಉತ್ತೇಜಿಸುವ ನೀತಿ ಕುರಿತಂತೆ ಚರ್ಚಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇವಿ ಕ್ಷೇತ್ರದ ಖಾಸಗಿ ಪಾಲುದಾರರು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.

ಭಾರತದಲ್ಲಿ ಸ್ವಚ್ಛ, ಮಾಲಿನ್ಯರಹಿತ ಚಲನಶೀಲತೆಯ ಪರಿವರ್ತನೆಯನ್ನು ವೇಗಗೊಳಿಸುವುದು ಮತ್ತು ವಿದ್ಯುತ್ ಚಾಲಿತ ವಾಹನ (ಇವಿ) ಅಳವಡಿಕೆಯನ್ನು ಹೆಚ್ಚಿಸುವ ಬಗ್ಗೆ ಭಾರತದ ಆಟೋಮೋಟಿವ್ ವಲಯದ ಪ್ರಮುಖರು ಸಚಿವಾಲಯದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ವಿದ್ಯುತ್ ಚಾಲಿತ ವಾಹನ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಶಕ್ತಿ ತುಂಬವುದು. ಇಂಥ ವಾಹನಗಳನ್ನು ಹೆಚ್ಚು ಬಳಕೆ ಮಾಡುವುದು, ಮಾಲಿನ್ಯಮುಕ್ತ ಪ್ರಚಾರಕ್ಕಾಗಿ ವ್ಯೂಹಾತ್ಮಕ ಕಾರ್ಯತಂತ್ರಗಳು ಹಾಗೂ ಸ್ಥಳೀಯ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸುವ ಮಾರ್ಗೋಪಾಯಗಳ ಕುರಿತು ಸಚಿವರು ಉದ್ಯಮ ಪ್ರತಿನಿಧಿಗಳು ಸಚಿವರ ಗಮನ ಸೆಳೆದರು.

ಭಾರತ ಜಾಗತಿಕ ಇವಿ ಹಬ್ ಆಗಿ ಪರಿವರ್ತನೆ; ಸಚಿವರ ವಿಶ್ವಾಸ

ಸ್ವಚ್ಛ ಚಲನಶೀಲತೆ ಇವತ್ತಿನ ತುರ್ತು ಅಗತ್ಯ. ನಗರ ಪ್ರದೇಶಗಳಲ್ಲಿ ಮೂಲಸೌಕರ್ಯವನ್ನು ಎಲೆಕ್ಟ್ರಿಕ್‌ ವಾಹನ ಕ್ಷೇತ್ರಕ್ಕೆ ಅನುಗುಣವಾಗಿ ಪರಿವರ್ತಿಸುವುದು ಮತ್ತು ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕ್ಷಿಪ್ರಗತಿಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. 5 ಟ್ರಿಲಿಯನ್ ಡಾಲರ್‌ ಆರ್ಥಿಕತೆಯ ಗುರಿಯನ್ನು ಮುಟ್ಟಲು ಆಟೋಮೊಬೈಲ್‌ ಕ್ಷೇತ್ರವನ್ನು ಮಾಲಿನ್ಯಮುಕ್ತ, ಸ್ವಾವಲಂಭಿ ಕ್ಷೇತ್ರವನ್ನಾಗಿ ರೂಪಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸು. ಈ ನಿಟ್ಟಿನಲ್ಲಿ ಉದ್ಯಮದ ಖಾಸಗಿ ಪಾಲುದಾರರು ನಿರ್ಣಾಯಕ ಹೆಜ್ಜೆಗಳನ್ನು ಇಡಬೇಕಾಗುತ್ತದೆ ಎಂಬ ಅಂಶವನ್ನು ಸಚಿವ ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಇಂಗಾಲದ ಶೂನ್ಯ ಹೊರಸೂಸುವಿಕೆ ಗುರಿ ಸಾಧಿಸುವ ಹಿನ್ನೆಲೆಯಲ್ಲಿ ʼಮೇಕ್ ಇನ್ ಇಂಡಿಯಾʼ ಮತ್ತು ʼಆತ್ಮನಿರ್ಭರ ಭಾರತ್‌ʼ ಕಾರ್ಯಕ್ರಮಗಳ ಅಡಿಯಲ್ಲಿ ವೇಗವಾಗಿ ಕೆಲಸ ಮಾಡುವ ಬದ್ಧತೆಯನ್ನು ಬೃಹತ್ ಕೈಗಾರಿಕೆ ಸಚಿವಾಲಯ ಹೊಂದಿದೆ ಎಂದು ತಿಳಿಸಿದ ಸಚಿವರು; ಜಾಗತಿಕ ಸ್ಪರ್ಧಾತ್ಮಕತೆಗೆ ತಕ್ಕಂತೆ ಸ್ಥಳೀಯ ಇವಿ ಕ್ಷೇತ್ರದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿದ್ಯುತ್ ಚಾಲಿತ ವಾಹನ ತಯಾರಿಕೆಗೆ ಅನುಕೂಲವಾಗುವ ಪೂರಕ ವ್ಯವಸ್ಥೆಯನ್ನು ಒದಗಿಸುವ ದಿಕ್ಕಿನಲ್ಲಿಯೇ ಕೇಂದ್ರವು ತನ್ನೆಲ್ಲಾ ನೀತಿಗಳನ್ನು ರೂಪಿಸಿದೆ ಎಂದರು.

ಇದೇ ವೇಳೆ FAME I & II, ಆಟೋ PLI, ACC PLI, ಮತ್ತು PM E-ಡ್ರೈವ್‌ನಂತಹ ಯೋಜನೆಗಳ ಅಡಿಯಲ್ಲಿ ಸಾಧಿಸಲಾದ ಪ್ರಗತಿಯನ್ನು ಖಾಸಗಿ ಪಾಲುದಾರರು ಶ್ಲಾಘಿಸಿದರು. ಈ ಉಪಕ್ರಮಗಳು ಭಾರತವು ಜಾಗತಿಕ ಮಟ್ಟದ ವಿದ್ಯುತ್ ಚಾಲಿತ ವಾಹನ ಉತ್ಪಾದನೆ ಮತ್ತು ನಾವೀನ್ಯತಾ ಕೇಂದ್ರವಾಗಿ ಹೊರಹೊಮ್ಮಲು ಬಲವಾದ ಅಡಿಪಾಯವನ್ನು ಹಾಕಿವೆ ಎಂದು ಅಭಿಪ್ರಾಯಪಟ್ಟರು.

ಅಲ್ಲದೆ, ಖಾಸಗಿ ಪಾಲುದಾರರ ಸಲಹೆಗಳನ್ನು ಆಲಿಸಿದ ಸಚಿವರು, ಅವುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ