ಈ ಹಳ್ಳಿಗಳಲ್ಲಿ ಮೊಹರಂ ಹಬ್ಬ ನಿಷೇಧ.!
ಬಳ್ಳಾರಿ : ಜಿಲ್ಲೆಯಾದ್ಯಾಂತ ಜೂನ್ 27 ರಿಂದ ಜುಲೈ 07 ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.
ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ವೈಶಮ್ಯ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದ್ದು, ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 (ಎ) (ಬಿ) (ಡಿ) (ಇ) ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿಗಳು, ಜೂನ್ 27 ರಿಂದ ಜುಲೈ 07 ರವರೆಗೆ ಆಚರಿಸಲ್ಪಡುವ ಮೊಹರಂ ಹಬ್ಬವನ್ನು ಜಿಲ್ಲೆಯ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ನಿಷೇಧಿಸಲಾಗಿದೆ.
ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಜನರು ಗುಂಪು ಸೇರದಂತೆ ಮೆರವಣಿಗೆ ನಡೆಸದಂತೆ ಮತ್ತು ಪಂಜಾಗಳನ್ನು ಕೂಡಿಸದಂತೆ ಮೊಹರಂ ಹಬ್ಬವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.