Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ

ಕಲ್ಲು ಎತ್ತಿ ಹಾಕಿ ಮಲಗಿದ್ದ ತಾಯಿಯನ್ನು ಬರ್ಬರವಾಗಿ ಕೊಂದ ಮಗ

ರಾಯಚೂರು:ಆಸ್ತಿ ಮೇಲಿನ ವ್ಯಾಮೋಹ ಮಾನವೀಯತೆಯನ್ನು ಮರೆಸುವ ಮಟ್ಟಕ್ಕೆ ತಲುಪಿದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಜಕ್ಕೇರುಮಡಗು ತಾಂಡಾದಲ್ಲಿ ನಡೆದಿದೆ. ಪಿತ್ರಾರ್ಜಿತ ಆಸ್ತಿಯ ಪಾಲಿನ ವಿಚಾರದಲ್ಲಿ ಉಂಟಾದ ಜಗಳದಿಂದ ಮದ್ಯದ ನಶೆಯಲ್ಲಿದ್ದ ಮಗನೊಬ್ಬ ಮಲಗಿದ್ದ ತನ್ನ ಹೆತ್ತ ತಾಯಿಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಮೃತ ಮಹಿಳೆಯನ್ನು ಚಂದವ್ವ (55) ಎಂದು ಗುರುತಿಸಲಾಗಿದ್ದು, ಈ ಕೃತ್ಯವನ್ನು ಆಕೆಯ ಪುತ್ರ ಕುಮಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಚಂದವ್ವ ಅವರಿಗೆ ಪಿತ್ರಾರ್ಜಿತವಾಗಿ ದೊರೆತ ಮೂರು ಎಕರೆ ಭೂಮಿಯನ್ನು ಪಾಲು ಮಾಡಬೇಕು ಎಂದು ಕುಮಾರ ನಿರಂತರವಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಅಣ್ಣ-ತಮ್ಮಂದಿರಿಗೆ ಪಾಲು ನೀಡಿ, ತನ್ನ ಪಾಲನ್ನು ಕೂಡಲೇ ನೀಡಬೇಕೆಂದು ಕುಮಾರ ತಾಯಿಯನ್ನು ಒತ್ತಾಯಿಸಿದ್ದಾನೆ.
ಆದರೆ, ನಾನು ಬದುಕಿರುವವರೆಗೆ ಆಸ್ತಿ ಪಾಲು ಮಾಡುವುದಿಲ್ಲ ಎಂದು ಚಂದವ್ವ ಸ್ಪಷ್ಟವಾಗಿ ಹೇಳಿದ್ದಾಳೆ. ಇದರಿಂದ ಕೋಪಗೊಂಡ ಕುಮಾರ ಮದ್ಯ ಸೇವಿಸಿ ನಶೆಯಲ್ಲಿದ್ದ ವೇಳೆ, ರಾತ್ರಿ ಮಲಗಿದ್ದ ತಾಯಿಯ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆಸ್ತಿ ವ್ಯಾಮೋಹ ಮಾನವ ಸಂಬಂಧಗಳನ್ನು ಹೇಗೆ ನಾಶಪಡಿಸುತ್ತಿದೆ ಎಂಬುದಕ್ಕೆ ಈ ಘಟನೆ ಭೀಕರ ಉದಾಹರಣೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ