LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈಸೂರು ಸ್ಫೋಟ ಪ್ರಕರಣ: ಎನ್‌ಐಎಯಿಂದ ತನಿಖೆ ಚುರುಕು

ಮೈಸೂರಿನಲ್ಲಿ ಹೀಲಿಯಂ ಸ್ಫೋಟ ಪ್ರಕರಣ ಇದೀಗ ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದ್ದು, ರಾಷ್ಟ್ರೀಯ ತನಿಖಾ ದಳ ತನಿಖೆಯನ್ನು ಚುರುಕುಗೊಳಿಸಿದೆ.

ಮೈಸೂರಿನ ಅಂಬಾ ವಿಲಾಸ ಅರಮನೆ ಮುಂಭಾಗದ ಜಯ ಮಾರ್ತಾಂಡ ದ್ವಾರದ ಬಳಿ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ವೇಳೆ ಬಲೂನ್‌ಗೆ ತುಂಬುವ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಸಲೀಂನ ದೇಹ ಛಿದ್ರಗೊಂಡಿತ್ತು.

ಇದೀಗ ಘಟನಾಸ್ಥಳಕ್ಕೆ ರಾಷ್ಟ್ರೀಯ ತನಿಖಾ ತಂಡ ಆಗಮಿಸಿ, ಪರಿಶೀಲನೆ ನಡೆಸಿದೆ. ಅಲ್ಲದೇ ಬಲೂನ್ ಮಾರುವ ಸಲೀಂನ ಹಿನ್ನೆಲೆ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ.  ಸಲೀಂ ಕೊಲ್ಕತ್ತಾದವ ಎನ್ನಲಾಗಿದ್ದು, ಇದೀಗ ಆತ ಉತ್ತರ ಪ್ರದೇಶ ಮೂಲದವನೆಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಸಹೋದರರ ಜೊತೆ ಮೈಸೂರಿಗೆ ಬಂದಿದ್ದ ಈತ ಕಳೆದ 15 ದಿನಗಳಿಂದ ಲಷ್ಕರ್ ಮೊಹಲ್ಲಾದ ಷರೀಪ್ ಲಾಡ್ಜ್ ನಲ್ಲಿ ವಾಸವಾಗಿದ್ದ. ಸಾಮಾನ್ಯವಾಗಿ ಹೀಲಿಯಂ ಸ್ಫೋಟವಾಗುವುದಿಲ್ಲ.

ಹೀಲಿಯಂಗೆ ಬೇರೆ ಗ್ಯಾಸ್ ಮಿಶ್ರಣ ಮಾಡಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಅರಮನೆಯ ಗೈಡ್ ಪ್ರಕಾರ, ಈ ಮೊದಲು ಈತ ಅರಮನೆ ಮುಂಭಾಗದಲ್ಲಿ ಯಾವತ್ತೂ ಬಲೂನ್ ಮಾರುತ್ತಿರಲಿಲ್ಲ. ಈತ ಬಂದ ಕೆಲ ಹೊತ್ತಿನಲ್ಲೇ ಸ್ಫೋಟ ಸಂಭವಿಸಿದ್ದು,  ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಎನ್ನುವ ಸಂದೇಹ ಮೂಡಿದೆ. ಹೀಗಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026