LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಹ ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ತಂತ್ರಜ್ಞಾನದ ಮೊರೆ

ಬೆಂಗಳೂರು: ನಗರದಲ್ಲಿ ಸುರಿವ ಮಳೆಗೆ ಬಿಬಿಎಂಪಿಯು ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಮಳೆಗಾಲದಲ್ಲಿ ಸಂಭವಿಸುವ ಅವಾಂತರಗಳನ್ನು ತಪ್ಪಿಸಲು ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ರಾಜಕಾಲುವೆ, ದ್ವಿತೀಯ ರಾಜಕಾಲುವೆ, ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಜೊತೆಗೆ ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳ ಬಳಿ ಇರುವ ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆ ಮೇಲೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ತೊಳುಚರಂಡಿಗಳನ್ನು ಸ್ವಚ್ಛಗೊಳಿಸುವುದು ಮತ್ತು ರಸ್ತೆ ಮೇಲೆ ಶೇಖರಣೆಯಾಗಿರುವ ಅನುಪಯುಕ್ತ ಕಟ್ಟಡ ತ್ಯಾಜ್ಯ (Debris)ಗಳ ತೆರೆವು ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ.

124 ಕಡೆ ಸೆನ್ಸಾರ್ ಗಳ ಅಳವಡಿಕೆ:

ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜಕಾಲುವೆಗಳಲ್ಲಿ ತಂತ್ರಜ್ಞಾನದ ಬಳಸಿಕೊಂಡು *124 ಕಡೆ ನೀರಿನ ಮಟ್ಟ ಅಳೆಯುವ ಸಂವೇದಕ(Water Level Sensor)ಗಳನ್ನು* ಕೆ.ಎಸ್.ಎನ್.ಡಿ.ಎಂ.ಸಿ ವತಿಯಿಂದ ಅಳವಡಿಸಲಾಗಿದೆ.

ಪ್ರತಿಯೊಂದು ಸೆನ್ಸಾರ್ ಯಂತ್ರಕ್ಕೂ ಸೋಲಾರ್ ಅಳವಡಿಸಲಾಗಿದೆ. ಅದರಿಂದ ನಿತ್ಯ ಅಂತರ್ಜಾಲದ ಮೂಲಕ ಕೆಎಸ್‌ಎನ್‌ಡಿಎಂಸಿ ನಿಯಂತ್ರಣ ಕೊಠಡಿಗೆ ಕೂಡಲೆ ಮಾಹಿತಿ ತಿಳಿಯಲಿದೆ. ಅವರು ಪಾಲಿಕೆಯ ಇಂಟಿಗ್ರೇಟೆಡ್ ಕಮಾಂಡಿಂಗ್ ಕಂಟ್ರೋಲ್ ಸೆಂಟರ್(ICCC)ಗೆ ಮಾಹಿತಿ ರವಾನೆ ಮಾಡಲಿದ್ದಾರೆ.

ಸೆನ್ಸಾರ್ ಅಳವಡಿಸಿರುವ ಕಡೆ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯಬಹುದಾಗಿದೆ. ಅದರಂತೆ ಹಸಿರು, ನೀಲಿ, ಕೆಂಪು ಹಾಗೂ ಕಪ್ಪು ಬಣ್ಣದಲ್ಲಿ ಗುರುತಿಸಲಾಗುತ್ತದೆ. ಹಸಿರು ಹಾಗೂ ನೀಲಿ ಬಣ್ಣವಿದ್ದರೆ ಯಾವುದೇ ಅಪಾಯವಿರುವುದಿಲ್ಲ. ಕೆಂಪು ಬಣ್ಣವಿದ್ದರೆ ಅಪಾಯ ಎಂದರ್ಥ ಹಾಗೂ ಕಪ್ಪು ಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಆ ಮಾಹಿತಿಗನುಗುಣವಾಗಿ ಪ್ರವಾಹ ಉಂಟಾಗುವ ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಬೇರೆಡೆ ತೆರಳುವಂತೆ ಸೂಚನೆ ನೀಡಬಹುದು. ಇದರಿಂದ ಪ್ರವಾಹದಿಂದಾಗುವ ಅನಾಗುತಗಳನ್ನು ತಪ್ಪಿಸಬಹುದಾಗಿದೆ.

860 ಕಿ.ಮೀ ಉದ್ದದ ರಾಜಕಾಲುವೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ 860 ಕಿ.ಮೀ ಉದ್ದದ ರಾಜಕಾಲುವೆಯಿದ್ದು, ಈ ಪೈಕಿ 581 ಕಿ.ಮೀ ಉದ್ದ ರಾಜಕಾಲುವೆಯನ್ನು ಆರ್.ಸಿ.ಸಿ ತಡೆಗೋಡೆಯಿಂದ ನಿರ್ಮಾಣ ಮಾಡಲಾಗಿದೆ. 199 ಕಿ.ಮೀ ಉದ್ದ ರಾಜಕಾಲುವೆಯ ಆರ್.ಸಿ.ಸಿ ತಡೆಗೋಡೆ ಕಾಮಗಾರಿಯು ಪ್ರಗತಿಯಲ್ಲಿದೆ. ಇನ್ನುಳಿದ 80 ಕಿ.ಮೀ ರಾಜಕಾಲುವೆಯು ಕಚ್ಚಾ ಡ್ರೈನ್ ಒಳಗೊಂಡಿರುತ್ತದೆ.

ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯಕ್ಕೆ ಚುರುಕು:

ನಗರದಲ್ಲಿ ಪಕ್ಕಾ ಡ್ರೈನ್ 581 ಕಿ.ಮೀ ಉದ್ದದ ಆರ್.ಸಿ.ಸಿ ತಡೆಗೋಡೆ ನಿರ್ಮಿಸಿರುವ ರಾಜಕಾಲುವೆಯ ಭಾಗದಲ್ಲಿ ಹೂಳೆತ್ತುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. ಅದಲ್ಲದೆ ತೆಗೆಯುವಂತಹ ಹೂಳನ್ನು ಕೂಡಲೆ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ.

74 ಪ್ರವಾಹ ಪೀಡಿತ ಪ್ರದೇಶಗಳಲ್ಲಿ‌ ಶಾಶ್ವತ ಪರಿಹಾರಕ್ಕೆ ಕ್ರಮ:

ನಗರದಲ್ಲಿ 74 ಕಡೆ ಪ್ರವಾಹ ಪೀಡಿತ ಪ್ರದೇಶಗಳಿದ್ದು, ಸದರಿ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಳೆಗಾಲದ ಹಿನ್ನೆಲೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭ