LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬ್ಯಾಂಕ್‌ಗಳಲ್ಲಿ ಕನ್ನಡಿಗರ ಸಂಖ್ಯೆಯಲ್ಲಿ ಕುಸಿತ….!

ಬೆಂಗಳೂರು: ಬ್ಯಾಂಕ್‌ಗಳಲ್ಲಿ ಆಡಳಿತಾತ್ಮಕವಾಗಿ ಕೆಲಸ ಮಾಡುವ ಕನ್ನಡಿಗರ ಸಂಖ್ಯೆ ನಿರಂತರವಾಗಿ ಕಡಿಮೆಯಾಗುತ್ತಿದ್ದು, ಇದು ಭವಿಷ್ಯದಲ್ಲಿ ಸಾಮಾಜಿಕ ಸಂಘರ್ಷಗಳಿಗೆ ಕಾರಣವಾಗಬಹುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಎಚ್ಚರಿಸಿದ್ದಾರೆ.

ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿಯ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಬ್ಯಾಂಕುಗಳು ಸಾರ್ವಜನಿಕ ಸಂಪರ್ಕ ವಿಭಾಗಗಳಲ್ಲಿ ಸ್ಥಳೀಯ ಭಾಷೆ ಬಲ್ಲವರನ್ನು ನೇಮಿಸುವುದು ಬಹಳ ಮುಖ್ಯವಾಗಿದ್ದು, ಇದು ವಿಳಂಬವಾದಲ್ಲಿ ನಾಡಿನೆಲ್ಲೆಡೆ ಸಾಮಾಜಿಕ ಸಂಘರ್ಷ ಆರಂಭವಾಗಲಿದೆ ಎಂದು ಹೇಳಿದರು, ಆಡಳಿತದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವ ಮೂಲಕ, ಬ್ಯಾಂಕ್‌ಗಳು ಜನಸ್ನೇಹಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಬ್ಯಾಂಕ್‌ಗಳ ಪ್ರತಿನಿಧಿಗಳೊಂದಿಗೆ ಶೀಘ್ರದಲ್ಲೆ ಸಭೆ ನಡೆಸಿ, ಸೂಚನೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

‘ಬ್ಯಾಂಕ್‌ಗಳಲ್ಲಿನ ಹೊರ ಗುತ್ತಿಗೆ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸುವುದು ಅತ್ಯಗತ್ಯ. ಈ ಕುರಿತಂತೆ ಟೆಂಡರ್‌ ನಿಯಮಗಳಲ್ಲಿ ಸ್ಪಷ್ಟವಾಗಿ ಷರತ್ತುಗಳನ್ನು ವಿಧಿಸಬೇಕು. ಹೊಸದಾಗಿ ನೇಮಕವಾಗುವ ಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಬೋಧಿಸಲು ಬ್ಯಾಂಕ್‌ಗಳ ತರಬೇತಿ ಕೇಂದ್ರಗಳಲ್ಲಿ ಕನ್ನಡ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲು ಕ್ರಮವಹಿಸಬೇಕು ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್4ನೇ ಬಾರಿಗೆ ಯುಪಿಎಸ್‌ಸಿ ಬರೆದು 18ನೇ ರ‍್ಯಾಂಕ್ ಪಡೆದ ಐಎಎಸ್ ರವಿ ಕುಮಾರ್ ಸಿಹಾಗ್ಕಾಲ ಕಾಲಕ್ಕೆ ರಾಸುಗಳಿಗೆ ಲಸಿಕೆಯನ್ನು ಹಾಕಿಸಿ: ಜಿ.ಬಿ.ಶೇಖರ್