Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಜೀವನ ಮಟ್ಟ ಸುಧಾರಣೆಯ ಆಯ್ಕೆಗಳು...

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾವು ನಮ್ಮ ಜೀವನದ ಸಾಕಷ್ಟು ಸಮಯವನ್ನು ಯಾವ ಸ್ಥಳದಲ್ಲಿ
, ಯಾವ ಪ್ರದೇಶದಲ್ಲಿ, ಯಾವ ವ್ಯಕ್ತಿಗಳೊಂದಿಗೆ, ಯಾವ ಭಾವದೊಂದಿಗೆ ಹೆಚ್ಚು ಹೆಚ್ಚು ಕಳೆಯುತ್ತೇವೆಯೋ ಅದರ ಪ್ರಭಾವ ನಮ್ಮ ಬದುಕಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಇದು ಬಹುತೇಕ ಅನಿವಾರ್ಯವಾಗಿ ಸಹಜವಾಗಿಯೇ, ಅನುಕೂಲಕ್ಕೆ ತಕ್ಕಂತೆ ನಡೆಯುತ್ತದೆ. ಇವುಗಳ ಮೇಲೆ ನಿಯಂತ್ರಣ ಸಾಧಿಸಬೇಕಿರುವುದು ನಮ್ಮ ಆಯ್ಕೆ ಮತ್ತು ವಿವೇಚನೆಗೆ ಬಿಟ್ಟಿದ್ದು. ಕೆಲವು ಉದಾಹರಣೆಗಳೆಂದರೆ.........

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ, ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌.

 ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ. ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ.

ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ. ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.

ಸಿನಿಮಾ, ನಾಟಕ, ಸರ್ಕಸ್ ಮುಂತಾದ ಸ್ಥಳಗಳು ಭಾವನೆಗಳನ್ನು ಕೆರಳಿಸುತ್ತವೆ, ದೇವ ಮಂದಿರ, ಚರ್ಚು, ಮಸೀದಿ, ಮಠ ಮಾನ್ಯಗಳು ಮುಂತಾದ ಪ್ರಾರ್ಥನಾ ಸ್ಥಳಗಳು ಭಾವನೆಗಳನ್ನು ನಿಯಂತ್ರಿಸುತ್ತವೆ.

ಐತಿಹಾಸಿಕ ಮತ್ತು ಪೌರಾಣಿಕ ಘಟನೆಗಳು ಕುತೂಹಲ ಮೂಡಿಸುತ್ತದೆ, ಪ್ರಸ್ತುತ ರಾಜಕೀಯ ಮತ್ತು ಹಿಂಸಾತ್ಮಕ ಘಟನೆಗಳು ಅಸಹ್ಯ ಮತ್ತು ಬೇಸರ ಮೂಡಿಸುತ್ತದೆ.

ಪ್ರಕೃತಿಯೊಂದಿಗಿನ ಒಡನಾಟ ಜೀವನೋತ್ಸಾಹ ಹೆಚ್ಚಿಸುತ್ತದೆ. ಆಧುನಿಕ ತಂತ್ರಜ್ಞಾನದ ಒಡನಾಟ ಜೀವನದ ಬಗ್ಗೆ ಜಿಗುಪ್ಸೆ ಹೆಚ್ಚಿಸುತ್ತದೆ. ಪ್ರಶ್ನಿಸುವ ಮನೋಭಾವ ಮನಸ್ಸನ್ನು ವಿಶಾಲಗೊಳಿಸಿ ಸದಾ ಜಾಗೃತವಾಗಿಟ್ಟಿರುತ್ತದೆ.

ಪ್ರಶ್ನಿಸದೆ ಒಪ್ಪಿಕೊಳ್ಳುವ ಮನೋಭಾವ ಮನಸ್ಸನ್ನು ಸಂಕುಚಿತಗೊಳಿಸಿ ಅರಿವಿನ ಮಟ್ಟವನ್ನು ಕುಗ್ಗಿಸುತ್ತದೆ. ದ್ವೇಷ, ಅಸೂಯೆ, ಅಹಂಕಾರ, ಪ್ರತಿಕಾರಗಳು, ಸಂಬಂಧಗಳನ್ನು ನಾಶಪಡಿಸುತ್ತದೆ.

ಪ್ರೀತಿ, ಸಹಕಾರ, ತ್ಯಾಗ, ತಾಳ್ಮೆ , ಕರುಣೆ, ಕ್ಷಮೆ  ಸಂಬಂಧಗಳನ್ನು ಬೆಳೆಯುತ್ತವೆ. ಈ ಎಲ್ಲಾ ಆಯ್ಕೆಗಳು ಬಹುತೇಕ ನಮ್ಮ ನಿಯಂತ್ರಣಕ್ಕೆ ಒಳಪಟ್ಟಿರುತ್ತದೆ. ಅನಿವಾರ್ಯತೆ ಹೊರತುಪಡಿಸಿ ನಾವು ಯಾವುದನ್ನು ಎಷ್ಟು ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳುತ್ತೇವೆ ಎಂಬುದರ ಮೇಲೆ ಬದುಕಿನ ಘನತೆ ನಿರ್ಧರಿಸಲ್ಪಡುತ್ತದೆ. ಆದಷ್ಟು ಉತ್ತಮ ವಾತಾವರಣದಲ್ಲಿ ಜೀವಿಸಲು ಪ್ರಯತ್ನಿಸಿ..........
ಲೇಖನ-ವಿವೇಕಾನಂದ. ಎಚ್. ಕೆ. 9663750451

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ