LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತ ಡಿವೈಎಸ್‍ಪಿ ಅವರಿಂದ ದೂರು ಅರ್ಜಿ ಸ್ವೀಕಾರ ಕಣ್ಣೀರು ಸುರಿಸಿದ ಮನವಿದಾರರು

ಮಡಿಕೇರಿ ಜು.12-ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ಅವರು ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಿದರು.

ಸಾರ್ವಜನಿಕರೊಬ್ಬರು ಪೊನ್ನಂಪೇಟೆಯಲ್ಲಿ ಐದೂವರೆ ಸೆಂಟ್ ಜಾಗವಿದ್ದು, ಪೌತಿಖಾತೆ ಮಾಡಲು 50 ಸಾವಿರ ರೂ. ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಕಣ್ಣೀರು ಸುರಿಸಿದರು.

ನಾನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು, ವಯಸ್ಸಾಗಿದೆ. ಪೊನ್ನಂಪೇಟೆಗೆ ಹೋಗಿ ಬರಲು ತುಂಬಾ ತೊಂದರೆಯಾಗಿದೆ. ಮಗಳ ಮದುವೆ ಮಾಡಬೇಕಿದ್ದು, ತುಂಬಾ ತೊಂದರೆಯಾಗಿದೆ. ಎರಡು ವರ್ಷದಿಂದ ಪೌತಿಖಾತೆ ಮಾಡಿಕೊಡದೆ ಸತಾಯಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.


ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ಅವರು ನಿಮ್ಮ ಕೆಲಸ ಕಾಲ ಮಿತಿಯಲ್ಲಿ ಆದ್ಯತೆ ಮೇಲೆ ಮಾಡಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.

ಮತ್ತೊಬ್ಬ ಮಹಾಲಕ್ಷ್ಮಿ ಅವರು ಜಾಗದ ಖಾತೆ ಮಾಡಿಕೊಡದೆ ಒಂದುವರೆ ವರ್ಷದಿಂದ ಅಲೆದಾಡಿಸುತ್ತಿದ್ದಾರೆ. ಜಾಗದ ಖಾತೆ ಮಾಡಿಸಿಕೊಡುವಂತೆ ಲೋಕಾಯುಕ್ತರಲ್ಲಿ ಮನವಿ ಮಾಡಿದರು.

ಈ ಬಗ್ಗೆ ಪೌರಾಯುಕ್ತರಾದ ವಿಜಯ್ ಅವರು ಹೊಸದಾಗಿ ಖಾತೆ ಆಗಬೇಕಿದೆ. ಶೀಘ್ರ ಖಾತೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಮತ್ತೊಬ್ಬರು ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಗ್ರಾಮದ ವಸಂತ ಪಿ.ಕೆ. ಅವರು ಜಾಗವನ್ನು ದುರಸ್ತಿ ಮಾಡಿಕೊಡುವಂತೆ ಹಲವು ವರ್ಷಗಳಿಂದ ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಮನವಿ ಮಾಡಿದರೂ ಸಹ ಕೆಲಸಗಳು ಆಗಿಲ್ಲ. ಈ ಸಂಬಂಧ ಕೆಲಸ ಮಾಡಿಸಿಕೊಡುವಂತೆ ಲೋಕಾಯುಕ್ತ ಡಿವೈಎಸ್ಪಿ ಅವರಲ್ಲಿ ಮನವಿ ಮಾಡಿದರು. ಈ ಬಗ್ಗೆ ತಕ್ಷಣವೇ ಸ್ಪಂದಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಅವರು ಹೇಳಿದರು.

ಮತ್ತೊಬ್ಬ ಮನವಿದಾರರು ಜಾಗದ ಖಾತೆ ಬದಲಾವಣೆ ಮಾಡಿಕೊಡಬೇಕಿದ್ದು, ಈ ಸಂಬಂಧ ಎಷ್ಟೇ ಮನವಿ ಮಾಡಿದರೂ ಸಹ ಇನ್ನೂ ಕೆಲಸವಾಗಿಲ್ಲ ಎಂದು ದೂರಿದರು. ತಮ್ಮ ಕೆಲಸವನ್ನು ಕಾಲಮಿತಿಯಲ್ಲಿ ಮಾಡಿಸಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ಅವರು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ದೂರುಗಳು ಬರುವುದು ಕಡಿಮೆಯಾಗಿದೆ. ಇದರಿಂದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಬದಲಾವಣೆಯಾಗುತ್ತಿರುವುದು ಕಂಡುಬರುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದಲ್ಲಿ ಕಲ್ಯಾಣ ರಾಜ್ಯ ನಿರ್ಮಾಣ ಮಾಡಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಒಳ್ಳೆಯ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸಹಕರಿಸಬೇಕು ಎಂದರು. ಕಚೇರಿಯಲ್ಲಿ ಹಾಜರಾತಿ ಬಯೋಮೆಟ್ರಿಕ್ ಅಳವಡಿಸಬೇಕು. ಚಲನವಲನ ವಹಿಯನ್ನು ದಾಖಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಪವನ್ಕುಮಾರ್ ಅವರು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು