LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ

ಶಿವಮೊಗ್ಗ,ಜ.16 : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ದಾಖಲಾದ ಒಟ್ಟು 43 ಪ್ರಕರಣಗಳಲ್ಲಿ ಅಮಾನತುಪಡಿಸಿಕೊಳ್ಳಲಾದ ಅಂದಾಜು ಮೌಲ್ಯ 21,84,660  ರೂಗಳ ಒಟ್ಟು 56  ಕೆಜಿ 740  ಗ್ರಾಂ ತೂಕದ ಮಾದಕ ವಸ್ತು ಗಾಂಜಾವನ್ನು,ಗುರುವಾರ ನಾಶಪಡಿಸಲಾಯಿತು.

ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಮೆ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿ ಇಲ್ಲಿ ಶಿವಮೊಗ್ಗ ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷ ಮಿಥುನ್‌ಕುಮಾರ್ ಸಮ್ಮುಖದಲ್ಲಿ ಈ ಕಾಯ್ ನಡೆಯಿತು.

ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ ಪಿ ಎ. ಜಿ. ಕಾರ್ಯಪ್ಪ, ಮೇ|| ಶುಶ್ರುತ ಬಯೋ ಮೆಡಿಕಲ್ ಪ್ರೈವೇಟ್ ಲಿಮಿಟೆಡ್ ಸೊಸೈಟಿಯ ಸಂಸ್ಥಾಪಕ ಶೇಖರ್, ಕಾರ್ಯದರ್ಶಿ ಡಾ|| ಗಿರೀಶ್ ಸಿ. ಎಸ್, ಪರಿಸರ ಅಧಿಕಾರಿಗ ರಮೇಶ್, ಡಿಎಸ್ಪಿ ಬಾಬು ಆಂಜನಪ್ಪ, ಭದ್ರಾವತಿ ಡಿಎಸ್ಪಿ ನಾಗರಾಜ್ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST