LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ sex CD ಪ್ರಕರಣ ಇಡೀ ಮನುಕುಲವೇ ತಲೆತಗ್ಗಿಸುವಂತೆ ಮಾಡಿದೆ-ಉಗ್ರಪ್ಪ

ಬೆಂಗಳೂರು:ಇತಿಹಾಸದಲ್ಲಿಯೇ ಕಂಡು ಕೇಳರಿಯದಂತಹ ಲೈಂಗಿಕ ಹಗರಣ ಕರ್ನಾಟಕದ ಹಾಸನದಲ್ಲಿ ನಡೆದಿರುವುದು ಇಡೀ ಮನುಕುಲವೇ ತಲೆ ತಗ್ಗಿಸುವ ಘಟನೆಯಾಗಿದ್ದು, ಚುನಾವಣೆಗೂ ಮುನ್ನ ಪ್ರಕರಣ ಮುನ್ನೆಲೆಗೆ ಇದ್ದರೂ ಪ್ರಜ್ವಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದು ಎಲ್ಲೋ ಒಂದು ಕಡೆ ಕಮಲದವರು ಅವರಿಗೆ ಸಹಕರಿಸಿರುವ ಅನುಮಾನ ವ್ಯಕ್ತವಾಗಿದೆ ಎಂದು ಮಾಜಿ ಸಂಸದ ಹಾಗು ಕಾಂಗ್ರೆಸ್ ವಕ್ತಾರ ಉಗ್ರಪ್ಪ ತಿಳಿಸಿದರು.

ಪ್ರಜ್ವಲ್ sex ವಿಡಿಯೋ ಪ್ರಕರಣ ಸಂಬಂಧ  ಹೊಳೆನರಸಿಪುರದ ಬಿಜೆಪಿ ಅಭ್ಯರ್ಥಿಯಾಗಿದ್ದ ದೇವರಾಜೇಗೌಡ ಅವರು ಸುಮಾರು ನಾಲ್ಕು ತಿಂಗಳ ಹಿಂದೆ ಮಾಧ್ಯಮಗೋಷ್ಠಿ ನಡೆಸಿ ಪ್ರಜ್ವಲ್ ರೇವಣ್ಣ ಅವರ ಸಿಡಿಗಳು ಇವೆ ಎಂದು ಮಾಹಿತಿ ನೀಡಿದ್ದರು. ಈ ವಿಚಾರವಾಗಿ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆದಿದ್ದರು.

ಐಪಿಸಿ ಸೆಕ್ಷನ್ 202 ಪ್ರಕಾರ ಕಾನೂನು ವಿರುದ್ದ ನಡೆದುಕೊಂಡಿದ್ದರೆ ಹಾಗೂ ಅದನ್ನು ಸಂಬಂಧಪಟ್ಟ ಪೊಲೀಸರಿಗೆ ಮಾಹಿತಿ ನೀಡದೆ ಇದ್ದರೆ ಅಪರಾಧವಾಗುತ್ತದೆ. ಕಾರು ಚಾಲಕ ಕಾರ್ತಿಕ್ ನಾನೇ ದೇವರಾಜೇಗೌಡ ಅವರಿಗೆ ವಿಡಿಯೋಗಳನ್ನು ನೀಡಿದೆ ಎಂದು ಸ್ವತಃ ಒಪ್ಪಿಕೊಂಡಿದ್ದಾನೆ.

ದೇವರಾಜೇಗೌಡ ಅವರಿಗೆ ಮಾಹಿತಿ ಇದ್ದರೂ ಸಹ ಈ ಕೃತ್ಯದ ಬಗ್ಗೆ ಸ್ಥಳೀಯ ಪೊಲೀಸ್ ಸ್ಟೇಷನ್ ಗೆ ಏಕೆ ತಿಳಿಸಿಲ್ಲ. ಇದು ಕಾನೂನಿನ ಉಲ್ಲಂಘನೆ. ಈ ವಿಚಾರದ ಬಗ್ಗೆ ಬಿಜೆಪಿ- ಜೆಡಿಎಸ್ ನಾಯಕರಿಗೆ ಮಾಹಿತಿ ಇದ್ದರೂ ತಿಳಿಸದೇ ಇರುವುದು ಕೂಡ ಕಾನೂನು ಉಲ್ಲಂಘನೆ.

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದ್ದು ಯಾರು? ವೀಸಾ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ.

ಮಹಿಳಾ ದೌರ್ಜನ್ಯ ಕುರಿತು ಎರಡು ವರದಿಗಳಿವೆ ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಮಾಡಿದ ಜಸ್ಟೀಸ್ ವರ್ಮಾ ಸಮಿತಿ ಹಾಗೂ ನಾನು ಅಧ್ಯಕ್ಷನಾಗಿದ್ದಾಗ ನೀಡಿದ ವರದಿಗಳು ಈ ದೇಶದಲ್ಲಿ ಇವೆ.

ನಿರ್ಭಯಾ ಪ್ರಕರಣದಲ್ಲಿ ಬಿಜೆಪಿಯವರು ಕಾಂಗ್ರೆಸ್ ಮೇಲೆ ಇಲ್ಲಸಲ್ಲದ ಅಪವಾದ ಮಾಡಿದರು. ಈ ರೀತಿಯ ಶೋಷಣೆಗೆ ಒಳಗಾದ ಮಹಿಳೆಯರಿಗೆ ಪರಿಹಾರ ನೀಡಬೇಕು ಹಾಗೂ ಈ ರೀತಿಯ ಘಟನೆಗಳನ್ನು ತಡೆಯಲು ಇಡಿ ದೇಶದಾದ್ಯಂತ ಜಾಗೃತಿ ಕಾರ್ಯಕ್ರಮಗಳ ನಡೆಸಬೇಕು ಎಂದು ವರ್ಮಾ ಸಮಿತಿ ಶಿಫಾರಸ್ಸು ಮಾಡಿತ್ತು.

ಬಿಜೆಪಿ ಮತ್ತು ಜೆಡಿಎಸ್ ಅವರು ಈ ಪ್ರಕರಣವನ್ನು ಮುಚ್ಚಿಹಾಕುವ ವ್ಯವಸ್ಥಿತವಾದ ಸಂಚು ನಡೆಯುತ್ತಿದೆ. ನಡೆಸಿದೆ. ತೂಗುವ ಕತ್ತಿಯಿಂದ ತಪ್ಪಿಸಿಕೊಂಡರೆ ನೂರು ವರ್ಷ ಆಯಸ್ಸು ಎನ್ನುವಂತೆ. ಈ ಪ್ರಕರಣದ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಕೆಸರು ಎರಚುವಂತಹ ಕೆಲಸ ಮಾಡಲಾಗುತ್ತಿದ ಬಿಜೆಪಿಯವರು ವರ್ಮಾ ಆಯೋಗದ ಶಿಫಾರಸ್ಸುಗಳನ್ನು ಓದಿ ಆನಂತರ ಕಾಂಗ್ರೆಸ್ ವಿಚಾರ ಮಾತನಾಡಬೇಕು.
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿಯವರೇ ದೇಶದ ಆಡಳಿತ ನಿಮ್ಮ ಕೈಯಲ್ಲಿ ಇರುವಾಗ ನೀವು ತೆಗೆದುಕೊಂಡಿರುವ ಕ್ರಮವೇನು?

ದೇವರಾಜೇಗೌಡ ಹಲವಾರು ಬಾರಿ ವಿಡಿಯೋ ಇದೆ ಎಂದಾಗಲೂ ಬಿಜೆಪಿ- ಜೆಡಿಎಸ್ ಅವರು ಏನು ಮಾಡಿದರು. ಈ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಪಟ್ಟ ಬಿಜೆಪಿ ವಿರುದ್ದವೂ ಎಸ್ ಐಟಿ ತನಿಖೆಯಾಗಬೇಕು. ಸಂತ್ರಸ್ತ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕು. ವಿಕೃತಿ ಮೆರೆದಿರುವ ತಪ್ಪಿತಸ್ಥನಿಗೆ ಶಿಕ್ಷೆಯಾಗಬೇಕು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದ