LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ ಇಷ್ಟು.!

 

ದಾವಣಗೆರೆ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಬೆಳೆಯಲಾದ  ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬೆಲ್ಟ್, ಚೈನ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 2,250/- ಹಾಗೂ ಟೈರ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 1,800/- ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದೆ.

ಭತ್ತದ ಬೆಳೆಯು ಕಟಾವಿನ ಹಂತ ತಲುಪಿರುತ್ತದೆ. ಹಾಗೂ ಜಿಲ್ಲೆಯಲ್ಲಿ ಭತ್ತದ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯ ಬಹುತೇಕ ರೈತರು ಭತ್ತದ ಬೆಳೆಯನ್ನು ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಅತಿಹೆಚ್ಚು ಬಾಡಿಗೆ ಹಣ ನಿಗದಿಪಡಿಸಲಾಗಿದೆ.

ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಭತ್ತ ಕಟಾವು ಯಂತ್ರದ ಮಾಲೀಕರು ಹೆಚ್ಚಿನ ದರ ನಿಗದಿಪಡಿಸಿದಲ್ಲಿ ರೈತರು ಕಂದಾಯ, ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಆಯುರ್ವೇದ ಪದ್ಧತಿಗೆ ಇಂದು ವಿಶ್ವಮಾನ್ಯತೆ -ಸಂಸದ ಗೋವಿಂದ ಎಂ.ಕಾರಜೋಳದೊಡ್ಡಪೇಟೆ ಕಾಟಲಿಂಗೇಶ್ವರಸ್ವಾಮಿ ದೇವರ ಮೂರುದಿನ ಗುಗ್ಗರಿ ಹಬ್ಬಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಫೆ.23 ರಂದು  ಉಸ್ತುವಾರಿ ಸಚಿವ ಕಚೇರಿ ಎದರು ಪ್ರತಿಭಟನೆಬಿಲ್ವಪತ್ರೆಯ ಮಹತ್ವದ ಬಗ್ಗೆ ಎಲ್ಲಾರು ತಿಳಿಯಬೇಕಾದ ವಿಷಯಗಳು!ವಚನ: -ತುರುಗಾಹಿ ರಾಮಣ್ಣ .!ಖಾಲಿ ಇರುವ 253 ಆಧಾರ್ ಮೇಲ್ವಿಚಾರಕ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಶಿಕ್ಷಣ ಇಲಾಖೆಯಲ್ಲಿ ರಂಗ ಶಿಕ್ಷಕರನ್ನು ನೇಮಕ: ಸಿಎಂ ಸಿದ್ದರಾಮಯ್ಯ.!5,349 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಭಾರತೀಯ ರೈಲ್ವೆ ಇಲಾಖೆ ಮುಂದಾಗಿದೆ.ಕಾಡು ಕೊತ್ತಂಬರಿ ಬಳಕೆಯಿಂದ  ಅಸ್ತಮಾ, ಹೃದಯದ ಆರೋಗ್ಯದ ಜೊತೆಗೆ ಅನೇಕ ಖಾಯಿಲೆಗಳಿಗೆ ಉತ್ತಮ ಮದ್ದು.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 22-02-2026