Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಸ್ ಪ್ರಯಾಣ : ಮಹತ್ವದ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

 

ಬೆಂಗಳೂರು :
ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರಿಗೆ ಉಚಿತ ಬಸ್‌ ಸಂಚಾರಕ್ಕೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ.
ರಾಜ್ಯದೊಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಇದ್ದು, ಐಷಾರಾಮಿ ಬಸ್ ಗಳಲ್ಲಿ ಉಚಿತ ಪ್ರಯಾಣ ಇಲ್ಲ. ಬಿಎಂಟಿಸಿ ಬಸ್ಸುಗಳಲ್ಲಿ ಮಾತ್ರ ಪುರುಷರಿಗೆ ಶೇ. 50 ಮೀಸಲು ಆಸನ ಇಲ್ಲ. ಉಳಿದ ಎಲ್ಲಾ ನಿಗಮಗಳ ಬಸ್ಸುಗಳಲ್ಲಿ ಪುರುಷರಿಗೆ ಶೇ. 50 ಮೀಸಲು ಇಡಲು ಆದೇಶ ಹೊರಡಿಸಿದ್ದು, ಇದು ದೇಶದಲ್ಲೇ ಮೊದಲಾಗಿದೆ. ಇನ್ನು ಮಹಿಳೆಯರ ಉಚಿತ ಪ್ರಯಾಣಕ್ಕೆ ಮೂರು ತಿಂಗಳ ಅವಧಿಯೊಳಗೆ ಸ್ಮಾರ್ಟ್ ಕಾರ್ಡ್ ನೀಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸ್ಮಾರ್ಟ್ ಕಾರ್ಡ್ ನೀಡುವ ತನಕ ಆಧಾರ ಕಾರ್ಡ್ ಸಹಿತ ಗುರುತಿನ ಕಾರ್ಡ್ ತೋರಿಸಿ ಪ್ರಯಾಣ ಮಾಡಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ರಾಜ್ಯದೊಳಗೆ ಸಂಚರಿಸುವ ಬಸ್ಸುಗಳಲ್ಲಿ ಮಾತ್ರ ಜಾರಿ
ಐಷಾರಾಮಿ ಬಸ್ಸುಗಳಾದ ರಾಜಹಂಸ, ಎಸಿ, ಸ್ಲೀಪರ್, ವಾಯುವಜ್ರ ದಂತಹ ಬಸ್ಸುಗಳಲ್ಲಿ ಯೋಜನೆ ಅನ್ವಯಿಸುವುದಿಲ್ಲ
ಬಿಎಂಟಿಸಿ ಬಸ್ಸು ಬಿಟ್ಟು, ಮಿಕ್ಕ ಎಲ್ಲಾ ನಿಗಮಗಳ ಬಸ್ಸುಗಳಲ್ಲಿ ಪುರುಷರಿಗೆ ಶೇ. 50 ಮೀಸಲು ಕಡ್ಡಾಯ.
ಫ್ರೀ ಪ್ರಯಾಣದ ವೆಚ್ಚವನ್ನು ಶೂನ್ಯ ಟಿಕೆಟ್ ಹಾಗೂ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ಭರಿಸಲಾಗುವುದು.
ಮೂರು ತಿಂಗಳಲ್ಲಿ ಸೇವಾ ಸಿಂಧು ಕೇಂದ್ರಗಳಲ್ಲಿ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಣೆ
ಸ್ಮಾರ್ಟ್ ಕಾರ್ಡ್ ಸಿಗುವ ತನಕ ಕರ್ನಾಟಕ ಸರ್ಕಾರ ಅಥವಾ ಕೇಂದ್ರ ಸರ್ಕಾರ ವಿತರಿಸಿರುವ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಲು ಅನುಮತಿ.
ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ"ಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನು ಸರಕಾರ ನೀಡಿದೆ.

'ಶಕ್ತಿ ಯೋಜನೆ"ಯಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಅದರಂತೆ ಈ ಕೆಳಗಿನ ನಾಲ್ಕು ಬಸ್‌ಗಳಲ್ಲಿ ಪ್ರಯಾಣಿಸಬಹುದು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ),
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬೆಂ.ಮ.ಸಾ.ಸಂಸ್ಥೆ),
ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂಸ್ಥೆ)
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ)

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ