LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೆ.1ರಿಂದ ಅ.1ರವರೆಗೆ ರಾಜ್ಯಾದ್ಯಂತ `ಬಸವ ಸಂಸ್ಕೃತಿ ಅಭಿಯಾನ’: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

ಬೆಂಗಳೂರು: ರಾಜ್ಯ ಸರಕಾರವು ಬಸವಣ್ಣನನ್ನು `ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರವರೆಗೆ ಒಂದು ತಿಂಗಳು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ `ಬಸವ ಸಂಸ್ಕೃತಿ ಅಭಿಯಾನ’ ನಡೆಸಲು ತೀರ್ಮಾನಿಸಿದೆ.

ಈ ಸಂಬಂಧವಾಗಿ ಒಕ್ಕೂಟದಲ್ಲಿರುವ ಸ್ವಾಮೀಜಿಗಳು  ಲಿಂಗಾಯತ ಮುಖಂಡ ಮತ್ತು ಸಚಿವ ಎಂ ಬಿ ಪಾಟೀಲ ಅವರೊಂದಿಗೆ ಅವರ ಸದಾಶಿವನಗರದ ಮನೆಯಲ್ಲಿ ಚರ್ಚೆ ನಡೆಸಿದ್ದಾರೆ. ಒಕ್ಕೂಟದ ಪರವಾಗಿ ಭಾಲ್ಕಿ ಮಠದ ಶ್ರೀ ಬಸವಲಿಂಗ ಪಟ್ಟದ್ದೇವರು, ಅಥಣಿಯ ಶ್ರೀ ಚೆನ್ನಬಸವ ಸ್ವಾಮೀಜಿ, ನೆಲಮಂಗಲದ ಪವಾಡ ಶ್ರೀಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಗೊರವಣ್ಣ ದೇವರ ಮಠದ ನಂಜುಂಡ ಸ್ವಾಮೀಜಿ, ನಿಜಗುಣ ಮಠದ ಇಮ್ಮಡಿ ನಿಜಗುಣ ಶ್ರೀಗಳು, ಬಸವ ಧರ್ಮಪೀಠದ ಬಸವಯೋಗಿ ಸ್ವಾಮೀಜಿ, ಚನ್ನಪಟ್ಟಣದ ಬೇಗೂರು ಮಠದ ಮೃತ್ಯುಂಜಯ ಸ್ವಾಮೀಜಿ ಸಚಿವರ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದರು.

ಬಳಿಕ ಮಾತನಾಡಿದ ಸಚಿವರು, ಈ ಅಭಿಯಾನವು ಬಸವಣ್ಣನ ಜನ್ಮಸ್ಥಳವಾದ ಬಸವನ ಬಾಗೇವಾಡಿಯಲ್ಲಿ ಸೆ.1ರಂದು ಚಾಲನೆ ಕಾಣಲಿದೆ. ಬಸವರಥವು ಎಲ್ಲ ಜಿಲ್ಲೆಗಳಲ್ಲೂ ಸಂಚರಿಸಿ ಅ.1ರಂದು ಬೆಂಗಳೂರನ್ನು ತಲುಪಲಿದೆ. ಅ.5ರಂದು ಲಕ್ಷಾಂತರ ಲಿಂಗಾಯತ ಅನುಯಾಯಿಗಳನ್ನು ಸೇರಿಸಿ, ಬೆಂಗಳೂರಿನಲ್ಲಿ ಬೃಹತ್ ಸಮಾರೋಪ ಸಮಾರಂಭ ಏರ್ಪಡಿಸಲಾಗುವುದು. ಇಲ್ಲಿ ಬಸವಣ್ಣನನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುವುದು. ಆದರೆ ಸಮಾರೋಪದ ಸ್ಥಳವಿನ್ನೂ ನಿಗದಿಯಾಗಿಲ್ಲ. ಮುಖ್ಯಮಂತ್ರಿಗಳ ಕಾಲಾವಕಾಶ ನೋಡಿಕೊಂಡು ಇದನ್ನು ನಿರ್ಧರಿಸಲಾಗುವುದು ಎಂದಿದ್ದಾರೆ.

ಅಭಿಯಾನದಲ್ಲಿ ಪ್ರತಿದಿನವೂ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಜತೆ ಸಂವಾದ, ಸಂಜೆ ಪಾದಯಾತ್ರೆ, ವಚನ ಸಂಗೀತ, ಸ್ವಾಮೀಜಿಗಳು ಮತ್ತು ಆಹ್ವಾನಿತ ಉಪನ್ಯಾಸಕರ ಭಾಷಣ, ರಾತ್ರಿ ಹೊತ್ತು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯರು ಬರೆದಿರುವ `ಜಂಗಮದೆಡೆಗೆ’ ನಾಟಕ ಪ್ರದರ್ಶನ ನಡೆಯಲಿವೆ. ಇದಕ್ಕೆ ಜಾಗತಿಕ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಬಸವದಳ, ಬಸವ ಸಮಿತಿ, ಬಸವ ಕೇಂದ್ರ, ಕದಳಿ ಮಹಿಳಾ ವೇದಿಕೆ ಮುಂತಾದ ಬಸವಪರ ಸಂಘಟನೆಗಳು ಕೈಜೋಡಿಸಿವೆ ಎಂದು ಒಕ್ಕೂಟದ ಅಧ್ಯಕ್ಷರಾಗಿರುವ ಶ್ರೀ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಸಮ ಸಮಾಜ ನಿರ್ಮಾಣ, ವ್ಯಸನಮುಕ್ತ ಸಮಾಜ, ಅಂಧಶ್ರದ್ಧೆ ಅಳಿಸಿ ಹಾಕುವುದು, ಸದೃಢ ಸಮಾಜ, ಮಕ್ಕಳಲ್ಲಿ ಅಧ್ಯಾತ್ಮದ ಅರಿವು, ಮಹಿಳೆಯರ ಘನತೆ ಮತ್ತು ವ್ಯಕ್ತಿತ್ವ ವಿಕಸನಗಳು ಅಭಿಯಾನದ ಪ್ರಮುಖ ಆಶಯಗಳಾಗಿವೆ ಎಂದು ಒಕ್ಕೂಟವು ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ