ಭ್ರಷ್ಟಾಚಾರದ ವಿರುದ್ದ ಕನ್ನಡ ಸಂಘಟನೆಗಳ ಹೋರಾಟ ಜೋರು
ಬೆಳಗಾವಿ : 70 ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯ ಸರಕಾರ ಬಿಡುಗಡೆ ಮಾಡಿದ್ದ 50 ಲ. ರು.ಅನುದಾನದ ದುರ್ಬಳಕೆಯ ವಿಚಾರಣೆಯನ್ನು ಆರಂಭಿಸಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಅವರ ಎದುರು ಕನ್ನಡ
ಸಂಘಟನೆಗಳ ಪ್ರಮುಖರು ಶನಿವಾರ ಹಾಜರಾಗಿ ಸಮಗ್ರ ವಿವರ ಒದಗಿಸಿದರು.
ದುರ್ಬಳಕೆ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರಕಾರ ಪ್ರಾದೇಶಿಕ ಆಯುಕ್ತರಿಗೆ ಕೋರಿದೆ.
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕಿತ್ತೂರು ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಮಹಾದೇವ ತಳವಾರ, ಸರ್ವೋದಯ ಸಂಘದ ಅಧ್ಯಕ್ಷ ಶ್ರೀನಿವಾಸ ತಾಳೂಕರ, ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ ) ಜಿಲ್ಲಾಧ್ಯಕ್ಷ ವಾಜಿದ ಹಿರೇಕೋಡಿ,
ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ, ಬಾಳಪ್ಪ ಗುಡಗೇನಟ್ಟಿ, ನಾಗೇಶ ಕೊಪ್ಪರ, ಶರೀಫ ಸನದಿ, ಈಶ್ವರಗೌಡ ಪಾಟೀಲ, ಸಿದ್ದಲಿಂಗಪ್ಪ
ಸುನಕುಪ್ಪಿ ಮುಂತಾದವರು ವಿಚಾರಣೆ ಕಾಲಕ್ಕೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.