LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐಎಎಸ್ ಅಥಿಕಾರಿ ಅಭಿನವ್ ಸಿವಾಚ್ ಯಶೋಗಾಥೆ

ಹರಿಯಾಣ : ಯುಪಿಎಸ್‌ಸಿ ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಯುಪಿಎಸ್‌ಸಿ ಗಾಗಿ ಹಲವಾರು ಅಭ್ಯರ್ಥಿಗಳು ಅನೇಕ ತ್ಯಾಗಗಳನ್ನು ಮಾಡಿರುತ್ತಾರೆ. ಹೀಗೆ ವಾರ್ಷಿಕ 30 ಲಕ್ಷ ರೂ. ಪ್ಯಾಕೇಜ್‌ನ ಸಂಬಳದ ಉದ್ಯೋಗದ ಆಫರ್ ತೊರೆದು ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಭಿನವ್ ಸಿವಾಚ್ ಯಶೋಗಾಥೆ ಇದು.

ಹರಿಯಾಣದ ಫತೇಹಾಬಾದ್ ಜಿಲ್ಲೆಯ ಗೊರಖ್‌ಪುರ ಗ್ರಾಮದವರಾದ ಅಭಿನವ್ ಸಿವಾಚ್ ಅವರು ಡಿಟಿಯುನಿಂದ ಬಿ.ಟೆಕ್ ಮತ್ತು ಐಐಎಂ ಕೋಲ್ಕತ್ತಾದಿಂದ ಎಂಬಿಎ ಪೂರ್ಣಗೊಳಿಸಿದ್ದಾರೆ. ಅವರ ತಂದೆ ಸತ್ಬೀರ್ ಸಿವಾಚ್ ಅವರು ಸೆಲ್ಟೆಕ್ಸ್ ಇಲಾಖೆಯಲ್ಲಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯುಪಿಎಸ್‌ಸಿ ಪರೀಕ್ಷೆ ಬರೆಯಲು ನಿರ್ಧರಿಸಿದ ಅಭಿನವ್ ಅವರು ವಾರ್ಷಿಕ 30 ಲಕ್ಷ ರೂ. ಪ್ಯಾಕೇಜ್‌ನ ಸಂಬಳದ ಉದ್ಯೋಗ ಪ್ರಸ್ತಾಪವನ್ನು ಅಭಿನವ್ ಅವರು ನಿರಾಕರಿಸಿದರು. 2022 ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದ ಅಭಿನವ್ ಅವರು ಅಖಿಲ ಭಾರತ 12ನೇ ರ‍್ಯಾಂಕ್ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ. ಅಭಿನವ್ ಅವರು ಪ್ರಸ್ತುತ ಹರಿಯಾಣದ ಕುರುಕ್ಷೇತ್ರದಲ್ಲಿ ಎಸ್‌ಡಿಎಂ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಐಎಎಸ್ ಅಧಿಕಾರಿ ಅಭಿನವ್ ಸಿವಾಚ್ ಅವರು ಇದೇ ನವೆಂಬರ್ 27ರಂದು ಐಪಿಎಸ್ ಅಧಿಕಾರಿ ಆಶ್ನಾ ಚೌಧರಿ ಅವರನ್ನು ವಿವಾಹವಾಗುತ್ತಾರೆ. 2022ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದ ಆಶ್ನಾ ಚೌಧರಿ ಅವರು ಅಖಿಲ ಭಾರತ 116ನೇ ರ‍್ಯಾಂಕ್ ಪಡೆದಿದ್ದಾರೆ. ಆಶ್ನಾ ಅವರು ಪ್ರಸ್ತುತ ಉತ್ತರ ಪ್ರದೇಶದ ಮಥುರಾದಲ್ಲಿ ಎಎಸ್‌ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026