ಶಾಲೆಯಲ್ಲಿದ್ದ ಸಿಲಿಂಡರ್ ಕಳ್ಳತನ ಮಾಡಿದ ಕಳ್ಳರು.!
ಬೀದರ್: ಎಲ್ ಪಿಜಿ ಸಿಲಿಂಡರ್ ಅಭಾವ ಶುರುವಾಗಿದ್ದು, ಈ ನಡುವೆ ಸರ್ಕಾರಿ ಶಾಲೆಯಲ್ಲಿದ್ದ 6 ಸಿಲಿಂಡರ್ ಗಳನ್ನೇ ಕಳ್ಳರು ಕದ್ದೊಯ್ದ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಹಲಸೂರು ತಾಲೂಕಿನ ಗೊರ್ಟಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕ ಪಬ್ಲಿಕ್ ಶಾಲೆಯ ಅಡುಗೆ ಕೋಣೆಯ ಬೀಗ ಮುರಿದಿರುವ ಕಳ್ಳರು, ಅಲ್ಲಿದ್ದ 6 ಸಿಲಿಂಡರ್ ಗಳನ್ನು ಕದ್ದು ಪರಾರಿಯಾಗಿದ್ದಾರೆ.
ಎಂದಿನಂತೆ ಇಂದು ಶಿಕ್ಷಕರು ಶಾಲೆಗೆ ಬಂದಾಗಲೇ ಅಡುಗೆ ಕೋಣೆ ಬೀಗ ಮುರಿದಿರುವುದು ಹಾಗೂ ಸಿಲಿಂಡರ್ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಮಕ್ಕಳಿಗೆ ಬಿಸಿಯೂಟ ತಯಾರಿಸಲು ಸಿಲಿಂಡರ್ ಇಲ್ಲದಂತಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.