LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ವಿಸರ್ಜನೆ,ಯಡಿಯೂರು ಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ

ಬೆಂಗಳೂರು: ಗಣೇಶ ಹಬ್ಬ ಹಿನ್ನೆಲೆ ನಗರದ ದಕ್ಷಿಣ ವಲಯ ಪದ್ಮನಾಭನಗರ ವ್ಯಾಪ್ತಿಯಲ್ಲಿ ಬರುವ ಯಡಿಯೂರು ಕೆರೆ ವಿಸರ್ಜನಾ ಕೊಳ(ಕಲ್ಯಾಣಿ)ಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಯಡಿಯೂರು ಕರೆಯ ವಿಸರ್ಜನಾ ಕೊಳದಲ್ಲಿ 2023ರಲ್ಲಿ 11 ದಿನಗಳ ಅವಧಿಯಲ್ಲಿ ಅಂದಾಜು 1,75,000 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿತ್ತು. ಈ ಬಾರಿ 7ನೇ ಸೆಪ್ಟೆಂಬರ್ 2024 ರಿಂದ 17ನೇ ಸೆಪ್ಟೆಂಬರ್ 2024ರವರೆಗೆ 11 ದಿನಗಳ ಅವಧಿಯವರೆಗೆ ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮೊದಲ 3 ಮೂರುದಿನಗಳ ಕಾಲ ಹೆಚ್ಚು ಗಣೇಶ ಮೂರ್ತಿಗಳು ವಿಸರ್ಜನೆಯಾಗಲಿದ್ದು, ವಿಸರ್ಜನಾ ಕೊಳ ಬಹುತೇಖ ಭರ್ತಿಯಾಗಲಿದೆ. ಈ ಹಿನ್ನೆಲೆಯಲ್ಲಿ 10ನೇ ಸೆಪ್ಟೆಂಬರ್ 2024 ರಂದು ಶುಚಿತ್ವ ಕಾರ್ಯದ ನಿಮಿತ್ತ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ಇರುವುದಿಲ್ಲ. 11 ರಿಂದ 17ನೇ ತಾರೀಖಿನವರೆಗೆ ಮಾತ್ರ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲು ಅಗತ್ಯ ಸೌಲಭ್ಯಗಳ ವ್ಯವಸ್ಥೆಗೆ ಪಾಲಿಕೆ ಕ್ರಮ ಕೈಗೊಂಡಿರುತ್ತದೆ.

18ನೇ ಸೆಪ್ಟೆಂಬರ್ 2024 ರಿಂದ ಸದರಿ ಕೆರೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ಇರುವುದಿಲ್ಲ ಎಂದು ಪದ್ಮನಾಭ ನಗರ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ.

ಪಿಓಪಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶವಿಲ್ಲ:

ಯಡಿಯೂರು ಕೆರೆ ವಿಸರ್ಜನಾ ಕೊಳದಲ್ಲಿ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ವಿರ್ಜನೆ ಮಾಡಲು ಅವಕಾಶ ನೀಡಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಓಪಿ) ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಅವಕಾಶ ನೀಡುವುದಿಲ್ಲ.

ಈ ವೇಳೆ ಪದ್ಮನಾಭ ನಗರ ವಿಭಾಗದ ಕಾರ್ಯಪಾಲಕ ಅಭಿಯಂತರರು, ಬನಶಂಕರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಇನ್ನಿತರು ಉಪಸ್ಥಿತರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದ