LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ'- ಸಿ.ಎಂ.

ಮಂಡ್ಯ : ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ED ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

ನಾನು ಹೇಳಿದ್ನಾ?

ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.

ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಶ ನಡೆಯುತ್ತಿದೆ ಎಂದರು.ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025ವಚನ: -ಘಟ್ಟಿವಾಳಯ್ಯ .!ಧರ್ಮಸ್ಥಳದಲ್ಲಿ ಹೊಡೆದಾಟ : ನೇತ್ರಾವತಿ ಪಾಂಗಾಳ ಸಮೀಪ ಯೂಟ್ಯೂಬರ್ಸ್ ಮೇಲೆ ಹಲ್ಲೆ