LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ: ಸಿ‌.ಎಂ ಪ್ರಶ್ನೆ

ಮೈಸೂರು : ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. 

ಸಿದ್ಧಾರ್ಥ ಎಜುಕೇಷನ್ ಸೊಸೈಟಿಯ ಕ್ವೆಸ್ಟ್ ಶಿಕ್ಷಣ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದರು.ಬರೀ ಶಿಕ್ಷಣ ಸಿಕ್ಕರೆ ಸಾಲದು. ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯ. ಬಹಳ ಮಂದಿ ಶಿಕ್ಷಿಣ ಪಡೆದಿರುತ್ತಾರೆ, ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾದು, ಧಾರ್ಮಿಕ ತಾರತಮ್ಯ ಪಾಲಿಸೋದು ಮಾಡಿದ್ರೆ ಅಂಥಾ ಶಿಕ್ಷಣದಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಕೆಲವರು ಮಾತ್ರ ಸಮಾಜದ ಸವಲತ್ತುಗಳನ್ನು ಅನುಭವಿಸಬೇಕಾ? ಸಮಾಜದ ಪ್ರತಿಯೊಬ್ಬರಿಗೂ ಈ ಸವಲತ್ತುಗಳು ಸಿಗಬೇಕು ತಾನೇ? ಸಾಮಾಜಿಕ ತಾರತಮ್ಯ ಹೋಗಬೇಕೂ ತಾನೇ ಎಂದು ಪ್ರಶ್ನಿಸಿದರು.

ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ ಎಂದು ಪ್ರಶ್ನಿಸಿದರು.

ಬಸವಣ್ಣನವರು ಜಾತಿ ವ್ಯವಸ್ಥೆ ವಿರುದ್ಧ ಸಂದೇಶ ಕೊಟ್ಟು 850 ವರ್ಷ ಆಯ್ತು. ಆದರೆ ಇವತ್ತೂ ಅವರೆಲ್ಲಾ ಜಾತಿ ಮಾಡ್ತಾನೇ ಇದಾರೆ. ಇದು ತಪ್ಪಲ್ವಾ ಎಂದು ಪ್ರಶ್ನಿಸಿದರು.

ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಈ ಹಕ್ಕು ಸುಮ್ಮನೆ ಬರಲಿಲ್ಲ. ಶೂದ್ರರ ರೀತಿ, ಮಹಿಳೆಯರನ್ನೂ ಸಂಪೂರ್ಣವಾಗಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಮೂಲೆಯಲ್ಲಿ ಇರಿಸಲಾಗಿತ್ತು. ಆದರೆ ಈಗ ನಿರಂತರ ಹೋರಾಟದ ಫಲವಾಗಿ ಶಿಕ್ಷಣದ ಹಕ್ಕು ಬಂದಿದೆ. ಈ ಶಿಕ್ಷಣ ವೈಚಾರಿಕವಾಗಿರಬೇಕು, ವೈಜ್ಞಾನಿಕವಾಗಿರಬೇಕು ಎಂದರು.

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಹಣೆಬರಹ ಅನ್ನೋದನ್ನೆಲ್ಲಾ ಧಿಕ್ಕರಿಸಿದ್ದರು. ಆದರೂ ಈಗಲೂ ಬಸವಣ್ಣನವರ ಹೆಸರಲ್ಲಿ ಕರ್ಮಸಿದ್ಧಾಂತ ಪಾಲಿಸುವ ಶಿಕ್ಷಿತರಿದ್ದಾರೆ. ಇಂಥಾ ಶಿಕ್ಷಣ ಬೇಡವೇ ಬೇಡ ಎಂದರು.

ನಮ್ ಜಾತಿಯವನು ಅದ್ಕೆ ಓಟು ಹಾಕಿ: ಸಿ.ಎಂ ವ್ಯಂಗ್ಯ

ಹೇಳಿಕೊಳ್ಳೋಕೆ ವಿದ್ಯಾವಂತರು. ಆದರೆ, ಇವನು ನಮ್ ಜಾತಿಯವನಲ್ಲ, ಓಟು ಹಾಕೋದು ಬೇಡ ಅಂತಾರೆ. ಮತ್ತೆ ಕೆಲವರು ಇವನು ನಮ್ಮ ಜಾತಿಯವನು ಅದಕ್ಕೇ ಓಟು ಹಾಕಿ ಅಂತಾರೆ. ಅವನಿಗೆ ರಾಜಕೀಯ ಪ್ರಜ್ಞೆ , ತಿಳಿವಳಿಕೆ ಇದೆಯೊ, ಇಲ್ವೋ ಗೊತ್ತಿಲ್ಲ. ಕಾಳಜಿ ಇದೆಯೋ, ಇಲ್ವೋ ಗೊತ್ತಿಲ್ಲ. ಜಾತಿ ನೋಡು, ಓಟು ಹಾಕು ಅಷ್ಟೆ. ಇದಕ್ಕೆ ವಿದ್ಯೆ ಕಲಿಬೇಕಾ ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಶಾಸಕರೊಬ್ಬರ ಮಾತನ್ನು ಸ್ಮರಿಸಿದ ಸಿಎಂ, ಅವರು ರಾತ್ರಿ ಮಲಗುವಾಗಲೂ ಕೈ ಮುಗಿಯುತ್ತಲೇ ಮಲಗೋದಂತೆ. ಕೈ ಮುಗಿಯೋದು ರೂಢಿ ಆಗೋಗಿತ್ತು. ಇಂಥವರೆಲ್ಲಾ ಈಗ ರಾಜಕಾರಣಕ್ಕೆ ಬರ್ತಿದ್ದಾರೆ. ವಿದ್ಯಾವಂತ ಜಾತಿವಾದಿಗಳಿಂದ ಇಂಥವರು ಬರ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸಿದ್ಧಾರ್ಥ ಸಂಸ್ಥೆಯ ಅಧ್ಯಕ್ಷರಾದ ಗೃಹ ಸಚಿವರಾದ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ , ಶಾಸಕರಾದ ತನ್ವೀರ್ ಸೇಠ್ , ಕೃಷ್ಣಮೂರ್ತಿ, ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರಮಂಜು ಪಾಂಡವಪುರ ನಿರ್ದೇಶನದಲ್ಲಿ " ಮಣ್ಣಿನ ಮಗ ಮಾರ್ಗದರ್ಶಿ " ರೈತ ಸಾಧಕನ ಕುರಿತ ಸಾಕ್ಷಾಚಿತ್ರ