Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಶಿಕ್ಷಣದ ಜೊತೆ ಕ್ರೀಡೆಗೂ ಹೆಚ್ಚಿನ ಮಹತ್ವ ಕೊಡಬೇಕಾಗಿದೆ- ತಿಪ್ಪೇಸ್ವಾಮಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಾನವನ ಮನಸ್ಸು ಮತ್ತು ದೇಹ ಚುರುಕಾಗಿರಬೇಕಾದರೆ ಶಿಕ್ಷಣದ ಜೊತೆ ಕ್ರೀಡೆಗೂ ಹೆಚ್ಚಿನ ಮಹತ್ವ ಕೊಡಬೇಕಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಹೆಚ್.ತಿಪ್ಪೇಸ್ವಾಮಿ ಹೇಳಿದರು.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸರ್ಕಾರಿ ಕಲಾ ಕಾಲೇಜು ಸ್ವಾಯತ್ತ, ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಸಹಯೋಗದೊಂದಿಗೆ ಸರ್ಕಾರಿ ಕಲಾ ಕಾಲೇಜು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದ ಜ್ಞಾನವಲ್ಲ. ವ್ಯಕ್ತಿಯ ವ್ಯಕ್ತಿತ್ವದ ಸಮಗ್ರ ಅಭಿವೃದ್ದಿಯಾಗಿದೆ. ಹಾಗಾಗಿ ದೈಹಿಕ ಶಿಕ್ಷಣವನ್ನು ಶಿಕ್ಷಣದ ಅವಿಭಾಜ್ಯ ಅಂಗವೆಂದು ಪರಿಗಣಿಸಲಾಗಿದೆ. ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರುವುದಷ್ಟೆ ಅಲ್ಲ. ಶಿಸ್ತು ಮತ್ತು ನಾಯಕತ್ವದ ಗುಣ ಬೆಳೆಸುತ್ತದೆ. ಕ್ರೀಡೆ, ವ್ಯಾಯಾಮ, ಯೋಗ ಮತ್ತು ವಿವಿಧ ದೈಹಿಕ ಚಟುವಟಿಕೆಗಳು ಇಂದಿನ ಒತ್ತಡ ಜೀವನದಲ್ಲಿ ಪ್ರತಿಯೊಬ್ಬರಿಗೂ ಅತ್ಯವಶ್ಯಕ ಎಂದು ತಿಳಿಸಿದರು.

ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರುಗಳ ಕೊರತೆಯಿದ್ದು, ಕ್ರೀಡಾಪಟುಗಳಿಗೆ ತರಬೇತಿ ನೀಡುವುದು ಕಷ್ಟವಾಗಿದೆ. ಪ್ರತಿ ಸಾರಿಯೂ ನಾವುಗಳು ದೈಹಿಕ ಶಿಕ್ಷಕರುಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಕೊರತೆಯಿರುವ ದೈಹಿಕ ಶಿಕ್ಷಕರುಗಳನ್ನು ನೇಮಿಸಿ ಕ್ರೀಡೆಗೆ ಪ್ರೋತ್ಸಾಹ ನೀಡುವಂತೆ ಹೆಚ್.ತಿಪ್ಪೇಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದರು.

ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮಕ್ಸೂದ್ ಅಹಮದ್ ಮಾತನಾಡಿ ಇಂದಿನ ಯುವ ಪೀಳಿಗೆ ಮೊಬೈಲ್, ಫೇಸ್‌ಬುಕ್, ವಾಟ್ಸ್‌ಪ್‌ನಲ್ಲಿಯೇ ಕಾಲ ಕಳೆಯುವ ಬದಲು ಕ್ರೀಡೆಗಳ ಕಡೆ ಹೆಚ್ಚಿನ ಆಸಕ್ತಿ ವಹಿಸಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಂತಾಗಿರಬಹುದು. ಪಠ್ಯಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಮುಖ್ಯ ಎಂದು ಹೇಳಿದರು.

ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಜೆ.ಸಾಧಿಕ್ ಮಾತನಾಡುತ್ತ ದೈಹಿಕ ಶಿಕ್ಷಣ ನಿರ್ದೇಶಕರುಗಳ ಪರಿಶ್ರಮದಿಂದ ಈ ಬಾರಿ ಹೆಚ್ಚು ತಂಡಗಳು ಕ್ರೀಡೆಯಲ್ಲಿ ಭಾಗವಹಿಸಿರುವುದು ಅತ್ಯಂತ ಸಂತೋಷದ ಸಂಗತಿ. ಆಧುನಿಕ ಯುಗದಲ್ಲಿ ಎಲ್ಲರೂ ಒಂದಲ್ಲ ಒಂದು ರೀತಿಯ ಒತ್ತಡದ ಜೀವನದಲ್ಲಿ ಬದುಕುತ್ತಿರುವುದರಿಂದ ಕ್ರೀಡೆ ಮಾನಸಿಕ ಹಾಗೂ ದೈಹಿಕವಾಗಿ ಲವಲವಿಕೆಯಿಂದಿರಿಸುತ್ತದೆಂದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಶಿವಣ್ಣ, ಸರ್ಕಾರಿ ಕಲಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪ್ರಸನ್ನಕುಮಾರ್ ಡಿ.ಆರ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಿವಪ್ರಸಾದ್, ಪ್ರಾಧ್ಯಾಪಕರುಗಳಾದ ಮಧುಸೂದನ್, ಸತೀಶ್ ಅಳಸಂದಿ, ಪತ್ರಾಂಕಿತ ವ್ಯವಸ್ಥಾಪಕ ವೆಂಕಟೇಶ್ ಇವರುಗಳು ವೇದಿಕೆಯಲ್ಲಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ