LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯಗೆ ಇದು ಕೊನೇ ಅಧಿವೇಶನ : ವಿಜಯೇಂದ್ರ

ಬೆಳಗಾವಿ,ನ.21: ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನ ಮಂಡಲ ಚಳಿಗಾಲದ ಅಧಿವೇಶನವು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪಾಲ್ಗೊಳ್ಳಲಿರುವ ಕೊನೆಯ ಅಧಿವೇಶನವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟುದಿನ ತಾವು ಭ್ರಷ್ಟರಲ್ಲ ಎಂದು ಸಿದ್ದರಾಮಯ್ಯ ಹೇಳಿಕೊಳ್ಳು ತ್ತಿದ್ದರು. ಆದರೆ, ಈಗ ಅವರ ಇಡೀ ಕುಟುಂಬವೇ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಳುಗಿದೆ ಎಂದು ದೂರಿದರು.

ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಅವರು ರಾಜೀನಾಮೆ ನೀಡಬೇಕಿತ್ತು. ಆದರೆ, ಹಟಮಾರಿ. ಮುಖ್ಯಮಂತ್ರಿ ಸ್ಥಾನದ ಕೊನೆಯ ದಿನಗಳನ್ನು ಅವರು ಎಣಿಸುತ್ತಿದ್ದಾರೆ. ಆ ಸ್ಥಾನವನ್ನು ಕಾಂಗ್ರೆಸ್ ಹರಾಜಿಗೆ ಇಟ್ಟಿದೆ ಎಂದು ದೂರಿದರು.

ಕಾಂಗ್ರೆಸ್ ಶಾಸಕರೂ ಮುಖ್ಯಮಂತ್ರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಆದರೆ, ನಾವು ಆಪರೇಷನ್ ಕಮಲ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ದೂರಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST