LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ಈ ಪಾದ ಪುಣ್ಯ ಪಾದ" ಚಲನಚಿತ್ರ ಟೈಟಲ್ ಬಿಡುಗಡೆ

ಬೆಂಗಳೂರ :ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ಕನ್ನಡ ಚಲನಚಿತ್ರ “ಈ ಪಾದ ಪುಣ್ಯ ಪಾದ" ಎಂಬ ಚಲನಚಿತ್ರದ ಟೈಟಲನ್ನು ಖ್ಯಾತ ಚಲನಚಿತ್ರ ನಿರ್ದೇಶಕರಾದ "ಶಶಾಂಕ್" ರವರು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲಿ ಎಂದು ಚಿತ್ರ ತಂಡಕ್ಕೆ ಶುಭ ಕೋರಿದರು.
ದಾರಿ ಯಾವುದಯ್ಯಾ ವೈಕುಂಠಕೆ, ಬ್ರಹ್ಮ ಕಮಲ, ತಾರಿಣಿ ಮುಂತಾದ ಸದಭಿರುಚಿ ಚಿತ್ರಗಳನ್ನು ನಿರ್ದೇಶನ ಮಾಡಿ ಹಲವಾರು ಚಲನಚಿತ್ರ ಪ್ರಶಸ್ತಿ ಮುಡಿಗೇರಿಸಿಕೊಂಡು ಸೈ ಎನಿಸಿಕೊಂಡಿರುವ "ಸಿದ್ದು ಪೂರ್ಣಚಂದ್ರ" ರವರು ಈ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಈ ಕಥೆಯ ವಿಶೇಷವೇನೆಂದರೆ ಕಾಲುಗಳ ಮೇಲೆ ಕಥೆ ಬರೆಯಲಾಗಿದೆ.ಎಲ್ಲಾ ಪಾತ್ರಗಳ ಕಾಲುಗಳು ಕಥೆ ಹೇಳುತ್ತವೆ. ಮಗುವಿನ ಪಾದ, ದೊಡ್ಡವರ ಪಾದ, ವಯಸ್ಸಾದ ಪಾದ, ಧಣಿದ ಪಾದ, ಖುಷಿಯ ಪಾದ, ಪಾಪದ ಪಾದ, ಆನೆಕಾಲು ರೋಗಿಯ ಪಾದ ಹೀಗೆ ನಾನಾ ಪಾದಗಳಿಂದ ಕೂಡಿದ ವಿನೂತನ ಕಥಾ ಹಂದರ ಹೊಂದಿರುವ ಚಿತ್ರವಾಗಿದೆ.
ಮುಖ್ಯಪಾತ್ರದಲ್ಲಿ ಆಟೋ ನಾಗರಾಜ್, ಮಮತಾ ರಾಹುತ್, ಪ್ರಭಾಕರ್ ಬೋರೇಗೌಡ, ಪ್ರಮಿಳಾ ಸುಬ್ರಹ್ಮಣ್ಯಂ, ಹರೀಶ್ ಕುಂದೂರ್, ಸನ್ನಿ, ಇನ್ನೂ ಮುಂತಾದವರ ತಾರಾಗಣವಿದೆ. ಛಾಯಾಗ್ರಹಣ ರಾಜು ಹೆಮ್ಮಿಗೆಪುರ, ಸಂಗೀತ ಅನಂತ್ ಆರ್ಯನ್, ಸಂಕಲನ ದೀಪಕ್, ವಸ್ತ್ರ ವಿನ್ಯಾಸ ನಾಗರತ್ನ ಕೆ ಹೆಚ್, ಪ್ರೊಡಕ್ಷನ್ ಡಿಸೈನ್ ದಿಲೀಪ್ ಹೆಚ್ ಆರ್, ಕಾರ್ಯಕಾರಿ ನಿರ್ಮಾಪಕರು ಪುಟ್ಟರಾಜು ಎ ಕೆ ಆಲಗೌಡನ ಹಳ್ಳಿ ಮತ್ತು ಕಲಾ ನಿರ್ದೇಶನ ಬಸವರಾಜ್ ಆಚಾರ್ ,ಪಿಆರ್‌ಓ ಸುಧೀಂದ್ರ ವೆಂಕಟೇಶ,ಡಾ.ಪ್ರಭು ಗಂಜಿಹಾಳ,ಡಾ.ವೀರೇಶ ಹಂಡಿಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಗಸ್ಟ್ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ. ಬೆಂಗಳೂರು ರಾಮನಗರ, ಚನ್ನಪಟ್ಟಣ ಮತ್ತು ಸುತ್ತಮುತ್ತ ಹಳ್ಳಿಗಳಲ್ಲಿ ಚಿತ್ರೀಕರಣವಾಗುತ್ತದೆ ಎಂದು ನಿರ್ದೇಶಕ ಸಿದ್ದು ಪೂರ್ಣಚಂದ್ರ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು