LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾಲಾ ಮಕ್ಕಳಿಗೆ ಫ್ಲೇವರ್ಡ್ ಹಾಲು: ಕಾಳಸಂತೆಯ ಪೌಡರ್ ಹಾಲು ತಪ್ಪಿಸಲು ಈ ಯೋಜನೆ

ಬೆಂಗಳೂರು: ಶಾಲಾ ಮಕ್ಕಳಿಗೆ ಪ್ಲೇವರ್ಡ್ ಹಾಲು ನೀಡುವ ಬಗ್ಗೆ ಬಮೂಲ್ ನೂತನ ನಿರ್ದೇಶಕ ಡಿಕೆ ಸುರೇಶ್ ಶಾಲಾ ಶಿಕ್ಷಣ ಇಲಾಖೆಗೆ ಪ್ರಸ್ತಾಪಿಸಿದ್ದಾರೆ.

ಶಾಲಾ ಮಕ್ಕಳಿಗೆ ಚಾಕೊಲೇಟ್, ಬಾದಾಮಿ, ಸ್ಟ್ರಾಬೆರಿ ಸೇರಿ ವಿವಿಧ ಪ್ಲೇವರ್ಗಳ ಹಾಲು ನೀಡಲು ಶಿಕ್ಷಣ ಇಲಾಖೆಯೊಂದಿಗೆ ಪ್ರಾಯೋಗಿಕ ಯೋಜನೆಯ ಪ್ರಸ್ತಾಪವನ್ನು ಡಿಕೆ ಸುರೇಶ್ ಮುಂದಿಟ್ಟಿದ್ದಾರೆ.

ಮಕ್ಕಳಿಗೆ ಕೊಡುತ್ತಿರುವ ಪೌಡರ್ ರೂಪದ ಹಾಲು ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಇದರಿಂದಾಗಿ ಮಕ್ಕಳಿಗೆ ಸರಿಯಾಗಿ ಹಾಲು ಸಿಗುತ್ತಿಲ್ಲ. ಇದನ್ನು ತಪ್ಪಿಸಲು ನೇರ ಹಾಲು ಪೂರೈಕೆ ಮಾಡುವುದು ಬಮೂಲ್ ನಿರ್ದೇಶಕರ ಯೋಜನೆಯಾಗಿದೆ. ಸಾಮಾನ್ಯ ಹಾಲಿನ ದರ ಕೊಟ್ಟರೆ, ಟೆಟ್ರಾ ಪ್ಯಾಕೆಟ್‌ನಲ್ಲಿ ಮಕ್ಕಳಿಗೆ ಪೂರೈಕೆ ಮಾಡುತ್ತೇವೆ. ಟೆಟ್ರಾ ಪ್ಯಾಕೆಟ್‌ನಲ್ಲಿ ಶಾಲಾ ಮಕ್ಕಳಿಗೆ ವಿವಿಧ ಪ್ಲೇವರ್ಡ್ ಹಾಲು ಪೂರೈಕೆ ಮಾಡಲಾಗುತ್ತದೆ.



ಶಾಲಾ ಮಕ್ಕಳಿಗೆ ಪ್ಲೇವರ್ಡ್ ಹಾಲು ಪೂರೈಸುವ ಬಗ್ಗೆ ಡಿಕೆ ಸುರೇಶ್ ಅವರು ಈಗಾಗಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ವಿಚಾರವಾಗಿ ಮುಂದಿನ ವಾರ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಲಿದ್ದಾರೆ. ಒಂದು ವೇಳೆ ಸಿಎಂ ಗ್ರೀನ್‌ಸಿಗ್ನಲ್‌ ನೀಡಿದರೆ, ಶಾಲಾ ಮಕ್ಕಳಿಗೆ ಪ್ಲೇವರ್ಡ್ ನಂದಿನಿ ಹಾಲು ಪೂರೈಕೆಯಾಗಲಿದೆ.

ಬಮೂಲ್ ನಿರ್ದೇಶಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಕೆ ಸುರೇಶ್, ನಂದಿನಿ ಹಾಲಿನ ಪ್ಯಾಕೆಟ್ಟೆ ಹೊಸರೂಪ ಕೊಡಲು ಚಿಂತನೆ ನಡೆಸಿದ್ದರು. ಸದ್ಯ ಪಾಲಿಥಿನ್ ಪ್ಯಾಕೆಟ್ಗಳಲ್ಲಿ ನಂದಿನಿ ಹಾಲು ಮಾರಾಟವಾಗುತ್ತಿದ್ದು, ವಿದೇಶದಲ್ಲಿ ಬಳಕೆಯಲ್ಲಿರುವ ಬಯೋಡಿಗ್ರೇಡೇಬಲ್ ಪ್ಯಾಕೇಜಿಂಗ್ ಕವರ್ ತಯಾರಿಕೆಗೆ ಚಿಂತನೆ ನಡೆಸಿದೆ ಎಂದು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಸುರೇಶ್ ಹೇಳಿದ್ದರು.

ನೂತನ ತಂತ್ರಜ್ಞಾನದಡಿ ತಯಾರಿಸಲಾಗುವ ಬಯೋಡಿಗ್ರೇಡೇಬಲ್ ಪ್ಯಾಕೇಟ್ಗಳು ಕೇವಲ 6 ತಿಂಗಳಲ್ಲಿ ಮಣ್ಣಿನಲ್ಲಿ ಕರಗುವ ಸಾಮರ್ಥ್ಯ ಹೊಂದಿವೆ ಎನ್ನಲಾಗಿದ್ದು, ನಕಪುರದ ಶಿವನಹಳ್ಳಿಯಲ್ಲಿ ಬಯೋಡಿಗ್ರೇಡೇಬಲ್ ಪ್ಯಾಕೇಜಿಂಗ್ ಕವರ್ ತಯಾರಿಕೆ ಪ್ರಯೋಗ ಈ ತಿಂಗಳಿನಿಂದಲೇ ಆರಂಭವಾಗಲಿದೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026