LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನ ಮತ್ತಷ್ಟು ಹೆಚ್ಚಿಸಿದೆ'- ಸಿಎಂ

ಬೆಂಗಳೂರು : ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ.ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST