Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ದೇಶದ್ರೋಹ ಎಸಗಿದವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ : ರಾಹುಲ್ ಗುಡುಗು

ಹೊಸದಿಲ್ಲಿ, ಅ. 6: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಹಾಗೂ ‘ವೋಟ್‌ ಚೋರಿ’ ಆರೋಪಗಳ ವಿರುದ್ಧ ಇಂಡಿಯಾ ಒಕ್ಕೂಟ ಮಂಗಳವಾರ ನಡೆಸಿದ ಬೃಹತ್ ಪ್ರತಿಭಟನೆ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘ದೇಶಕ್ಕೆ ಮಾಡಿರುವುದು ದೇಶದ್ರೋಹ; ಇದರಲ್ಲಿ ಭಾಗಿಯಾದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಅವರು ಎಚ್ಚರಿಸಿದರು.

ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಯತ್ತ ಸುಮಾರು 300 ಲೋಕಸಭೆ ಮತ್ತು ರಾಜ್ಯಸಭೆ ಸಂಸದರು ಮೆರವಣಿಗೆ ನಡೆಸಿದರು. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆದ ಮೆರವಣಿಗೆಯನ್ನು ಪೊಲೀಸರು ಚುನಾವಣಾ ಆಯೋಗದ ಕಚೇರಿ ತಲುಪುವ ಮೊದಲೇ ತಡೆದರು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ‘ನಾನು ಇಲ್ಲಿ ದೇಶದ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಿಂತಿದ್ದೇನೆ. ನನ್ನೊಂದಿಗೆ ಲೋಕಸಭೆ ಮತ್ತು ರಾಜ್ಯಸಭೆಯ ಸುಮಾರು 300 ಸಂಸದರು ಬಂದಿದ್ದಾರೆ. ಅವರೂ ಪ್ರಜಾಪ್ರಭುತ್ವವನ್ನು ರಕ್ಷಿಸಲು ಹೋರಾಡುತ್ತಿದ್ದಾರೆ’ ಎಂದರು.

‘ನರೇಂದ್ರ ಮೋದಿ, ಅಮಿತ್ ಶಾ, ಮೋಹನ್ ಭಾಗವತ್ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ದೇಶದ ಪ್ರಜಾಪ್ರಭುತ್ವವನ್ನು ಮುಗಿಸಿದ್ದಾರೆ. ವೋಟ್‌ ಚೋರಿ ಮೂಲಕ ದೇಶವನ್ನು ಹೈಜಾಕ್ ಮಾಡಲಾಗಿದೆ ಮತ್ತು ಇದಕ್ಕೆ ಗ್ಯಾನೇಶ ಕುಮಾರ ನೆರವಾಗಿದ್ದಾರೆ’ ಎಂದು ರಾಹುಲ್ ಗಾಂಧಿ ಆರೋಪಿಸಿದರು.

‘ನಮ್ಮ ದೇಶಕ್ಕೆ ಮಾಡಿರುವುದು ದೇಶದ್ರೋಹ. ನರೇಂದ್ರ ಮೋದಿ ಆಗಿರಲಿ, ಅಮಿತ್ ಶಾ ಆಗಿರಲಿ, ಮೋಹನ್ ಭಾಗವತ್ ಆಗಿರಲಿ ಅಥವಾ ಗ್ಯಾನೇಶ ಕುಮಾರ ಆಗಿರಲಿ—ಇದರಲ್ಲಿ ಯಾರೂ ತಪ್ಪಿಸಿಕೊಳ್ಳುವುದಿಲ್ಲ. ಎಲ್ಲರ ವಿರುದ್ಧವೂ ಕ್ರಮವಾಗಲಿದೆ’ ಎಂದು ರಾಹುಲ್ ಗಾಂಧಿ ಹೇಳಿದರು.

ಚುನಾವಣಾ ಆಯೋಗದ ಕಚೇರಿ ಕೆಲವೇ ಗಜಗಳ ದೂರದಲ್ಲಿದ್ದರೂ ತಮ್ಮನ್ನು ಪೊಲೀಸರು ತಡೆಯುತ್ತಿರುವುದೇಕೆ ಎಂದು ಪ್ರಶ್ನಿಸಿದ ರಾಹುಲ್, ಸುಮಾರು 300 ಚುನಾಯಿತ ಸಂಸದರು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರನ್ನು ಭೇಟಿಯಾಗಲು ಬಯಸಿದ್ದರೂ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ನಾವು ಜನರನ್ನು ಪ್ರತಿನಿಧಿಸುತ್ತೇವೆ. ಹಾಗಿದ್ದರೂ ಚುನಾವಣಾ ಆಯುಕ್ತರು ನಮ್ಮನ್ನು ಭೇಟಿಯಾಗುತ್ತಿಲ್ಲವೇಕೆ?’ ಎಂದು ಪ್ರಶ್ನಿಸಿದರು.

ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಪೊಲೀಸ್ ಬ್ಯಾರಿಕೇಡ್ ಮೇಲೇರಿ ರಾಷ್ಟ್ರಧ್ವಜ ಬೀಸಿದ ಘಟನೆಯೂ ನಡೆಯಿತು. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಟಿಎಂಸಿ ಸಂಸದರಾದ ಅಭಿಷೇಕ್ ಬ್ಯಾನರ್ಜಿ, ಡೆರೆಕ್ ಒಬ್ರಿಯಾನ್ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಇಂಡಿಯಾ ಒಕ್ಕೂಟದ ಆರೋಪಗಳಿಗೆ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆಯ ಹೆಸರಿನಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಆರೋಪಿಸಿದರು. ಮತದಾರರ ಪಟ್ಟಿಯಲ್ಲಿರುವ ಗೈರುಹಾಜರಾದ, ಸ್ಥಳಾಂತರಗೊಂಡ, ಮೃತಪಟ್ಟ ಹಾಗೂ ನಕಲಿ ಮತದಾರರ ಪರಿಶೀಲನೆಗೆ ಕಾಂಗ್ರೆಸ್ ಏಕೆ ವಿರೋಧಿಸುತ್ತಿದೆ ಎಂದೂ ಅವರು ಪ್ರಶ್ನಿಸಿದರು.

ಚುನಾವಣಾ ಆಯೋಗದ ನಿಷ್ಪಕ್ಷಪಾತತೆ ಮತ್ತು ಎಸ್‌ಐಆರ್‌ ಪ್ರಕ್ರಿಯೆಯನ್ನು ಪ್ರಶ್ನಿಸಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು, ಗ್ಯಾನೇಶ ಕುಮಾರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಮಂಗಳವಾರದ ಪ್ರತಿಭಟನೆ ವೇಳೆ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ