Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಂಬೇಡ್ಕರ್, ಬಸವಣ್ಣನವರ ವಿಚಾರ ಧಾರೆಗಳು ಜೀವಂತ : ಮಾದಾರಶ್ರೀ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: 
ದೇಶಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ೧೨ನೇ ಶತಮಾನದ ಸಮಾನತೆ ಸಾರಿದ ಬಸವಣ್ಣನವರ ವಿಚಾರಧಾರೆಗಳನ್ನು ಗ್ರಾಮೀಣ ಭಾಗದ ಜನರಿಗೆ ಉಣಬಡಿಸುವ ಕಾರ್ಯಮಾಡುತ್ತಿರುವ ನಗರಂಗೆರೆ ಗ್ರಾಮಪಂಚಾಯಿತಿ ಹಿತರಕ್ಷಣಾವೇದಿಕೆ ಮತ್ತು ಮೂರ್ತಿ ಇಂಡಸ್ಟ್ರೀಸ್ ಶ್ಲಾಘನೀಯಕಾರ್ಯವೆಂದು ಚಿತ್ರದುರ್ಗದ ಮಾದರ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮಿ ಅಭಿಪ್ರಾಯಪಟ್ಟರು. 

ತಾಲ್ಲೂಕಿನ ಸಿದ್ದಾಪುರಗ್ರಾಮದ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಸಮಾನತೆಯ ಹರಿಕಾರ ಬಸವಣ್ಣನವರ ಜಯಂತಿಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಮಾತನಾಡಿದರು.

 ದೇಶದ ಮಹಾನ್‌ವ್ಯಕ್ತಿಗಳ ಸಾಧನೆಕುರಿತು, ಅವರ ಜೀವನಹೋರಾಟ ಕುರಿತಾದ ವಿಚಾರ ಗ್ರಾಮೀಣ ಭಾಗದ ಜನರಿಗೆ ತಿಳಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಜನರಲ್ಲೂ ಸಂವಿಧಾನ ಮತ್ತು ಬಸವಣ್ಣನವರ ಚಿಂತನೆಗಳ ಬಗ್ಗೆ ಜಾಗೃತಿ ಮೂಡುವಂತಾಗಬೇಕು ಎಂದರು.

ಕಾರ್ಯಕ್ರಮಕ್ಕೆ ಚಾಲನೆನೀಡಿ ಮಾತನಾಡಿದ ಗ್ರಾಮದ ಹಿರಿಯ ಮುಖಂಡ ಎಸ್.ಯಲ್ಲಪ್ಪ, ನಮ್ಮ ಗ್ರಾಮದಲ್ಲಿ ಇಂದು ಎರಡು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಗ್ರಾಮಸ್ಥರು ಹೆಚ್ಚಿನಸಂಖ್ಯೆಯಲ್ಲಿ ಈಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇಂತಹ ಕಾರ್ಯಕ್ರಮದಿಂದ ಎಲ್ಲರಲ್ಲೂ ಸ್ನೇಹ, ಭಕ್ತಿ, ಭಾವಮೂಡುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿ.ಸಿ.ಸಂಜೀವಮೂರ್ತಿ ಮಾತನಾಡಿ, ಇನ್ನೂ ಎರಡುವಾರಗಳ ಕಾಲ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರ ಚಿಂತನಮಂಥನ ಸಭೆ ನಡೆಯಲಿದೆ. ಗ್ರಾಮೀಣ ಭಾಗದ ಜನರಲ್ಲಿ ನಾಡಿಗೆ ಅಪರೂಪ, ಅಮೂಲ್ಯಕೊಡುಗೆ ನೀಡಿದ ಅಂಬೇಡ್ಕರ್, ಬಸವಣ್ಣನವರ ವಿಚಾರಧಾರೆಗಳನ್ನು ಹೆಚ್ಚು, ಹೆಚ್ಚು ತಿಳಿಸುವ ಉದ್ದೇಶ ಇದರಲಿ ಅಡಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಿ.ಸಿ ಸತೀಶ್‌ಕುಮಾರ್, ರುದ್ರಮುನಿಯಪ್ಪ, ಸಿದ್ದಾಪುರಶೇಖರಪ್ಪ, ಎಚ್.ಎಸ್.ಸೈಯದ್, ನಿರಂಜನ, ತಿಪ್ಪೇರುದ್ರಪ್ಪ, ಕಾರ್ತಿಕ್ ಎಸ್.ಮೂರ್ತಿ, ಮಾಜಿ ತಾಪಂ ಸದಸ್ಯ ಸಮರ್ಥರಾಯ, ಕೊರ್‍ಲಕುಂಟೆತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ