LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಳ್ಳಾರಿಯಲ್ಲಿ ಹಕ್ಕಿಜ್ವರ ಪತ್ತೆ- ಸಾವಿರಾರು ಕೋಳಿಗಳು ಸಾವು

ಬಳ್ಳಾರಿ: ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿವೆ.

ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು ಸತ್ತಿರುವುದು ದೃಢಪಟ್ಟಿದೆ. ತರಬೇತಿ ಕೇಂದ್ರದಲ್ಲಿ ರೈತರಿಗೆ ವಿತರಿಸಲು ಅಸೀಲ್ ತಳಿಯ ಕೋಳಿಗಳನ್ನು ಸಾಕಲಾಗಿತ್ತು.

ಕಳೆದ ಹತ್ತು ದಿನಗಳಿಂದ ಪ್ರತಿದಿನ ಮೂವತ್ತು ಕೋಳಿಗಳು ಸಾಯುತ್ತಿವೆ. ಕೋಳಿಗಳ ಸ್ಯಾಂಪಲ್‍ನ್ನು ಭೋಪಾಲ್‍ನಲ್ಲಿನ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಇದೀಗ ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿದೆ. ಇನ್ನೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ಮಾಹಿತಿ ನೀಡಿದೆ.

ಕೇಂದ್ರದ ಒಂದು ಕಿಮೀ ವ್ಯಾಪ್ತಿಯಲ್ಲಿ ಯಾವುದೇ ಹಳ್ಳಿಗಳು, ಜನವಸತಿ ಪ್ರದೇಶಗಳು ಇಲ್ಲ. 10 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ಖಾಸಗಿ ಕೋಳಿ ಫಾರ್ಮ್‍ಗಳು ಇಲ್ಲ. ಇದರಿಂದ ಹಕ್ಕಿಜ್ವರ ಬೆರೆಡೆಗೆ ಹರಡುವ ಸಾಧ್ಯತೆ ಕಡಿಮೆ ಇದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪಸಮಾನತೆಗೆ ಪೂರಕವಾಗಿ ಗ್ಯಾರಂಟಿ ಯೋಜನೆಗಳು ಜಾರಿ:  ಶಾಸಕ ಟಿ.ರಘುಮೂರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-01-2026.!ಇಂದಿನ ವಚನ: -ಹಡಪದ ಅಪ್ಪಣ್ಣ  ಅವರ ವಚನ..!ಫೆ. 1 ರಂದು ಹಿಂದೂ ಸಂಗಮ ಕಾರ್ಯಕ್ರಮ: ಅಧ್ಯಕ್ಷ ಅನಿತ್ ಕುಮಾರ್.!