LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರ ಗ್ರಾಮೀಣ ಕ್ಷೇತ್ರದ ಸಿಎಂ ಕಾರ್ಯಕ್ರಮಕ್ಕೆ ಸಹಸ್ರಾರು ಜನ

 

ರಾಯಚೂರ ಜೂನ್ 23  ರಾಯಚೂರ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 23ರಂದು ನಡೆದ ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ರಾಯಚೂರ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಜನರು ತಂಡೋಪ ತಂಡವಾಗಿ ಸೇರಿದ್ದರು.
ಸಿಎಂ ಕಾರ್ಯಕ್ರಮದಲ್ಲಿ ಭಾಗಿಯಾಗಲು ಉತ್ಸುಕರಾಗಿ ಜನರು ಬೆಳಗ್ಗೆಯಿಂದಲೇ ವಾಹನಗಳನ್ನು ಏರಿ ಯರಗೇರಾ ಗ್ರಾಮದತ್ತ ಬರುವ ದೃಶ್ಯಗಳು ಎಲ್ಲೆಡೆ ಕಾಣಿಸಿತು.
ಸಾರಿಗೆ ಬಸ್ಸುಗಳು, ಕ್ರೂಷರ್, ಮಿನಿಬಸ್, ಟಿಪ್ಪರ್, ಮಿನಿಲಾರಿ ಏರಿ ಜನರು ಯರಗೇರಾ ಗ್ರಾಮದತ್ತ ಆಗಮಿಸುತ್ತಿದ್ದರು. ರಾಯಚೂರ ಗ್ರಾಮೀಣ ಕ್ಷೇತ್ರ ಸೇರಿದಂತೆ, ರಾಯಚೂರ ನಗರ, ಸುತ್ತಲಿನ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬೀದರ, ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಜನರು ಸಹ ಕಾರ್ಯಕ್ರಮಕ್ಕೆ ಆಗಮಿಸಿ, ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಪೂರ್ವ ನಿಗದಿಯಂತೆ ಬೆಂಗಳೂರಿನಿ0ದ ವಾಯುಮಾರ್ಗವಾಗಿ ಹೊರಟ ಮುಖ್ಯಮಂತ್ರಿಗಳು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಹೆಲಿಪ್ಯಾಡಗೆ ಆಗಮಿಸಿ, ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಂತರ ಯರಗೇರಾ ಗ್ರಾಮದಲ್ಲಿನ ಮುಖ್ಯ ವೇದಿಕೆಯತ್ತ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಸಿಳ್ಳೆ ಹಾಕಿ ಸಂಭ್ರಮಿಸಿ ಸ್ವಾಗತಿಸಿದರು.
ಅಚ್ಚುಕಟ್ಟಾದ ವ್ಯವಸ್ಥೆ: ಕಾರ್ಯಕ್ರಮದಲ್ಲಿ ಕಿಕ್ಕಿರಿದು ಸೇರಿದ್ದ ಜನತೆಗೆ ಯಾವುದೇ ತೊಂದರೆಯಾಗದAತೆ ಮುಖ್ಯ ವೇದಿಕೆಯ ಬಳಿಯಲ್ಲಿ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು. ಸರಕಾರಿ ಬಸ್‌ಗಳು ಸೇರಿದಂತೆ ಹೆಚ್ಚಿನ ಖಾಸಗಿ ವಾಹನಗಳ ಮೂಲಕ ಜನತೆಗೆ ಉತ್ತಮವಾದ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಶಾಸಕರಿಂದ ಅಭಿನಂದನೆ: ರಾಯಚೂರ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 936.00 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ, ರಾಯಚೂರಲ್ಲಿನ ವಿಶ್ವವಿದ್ಯಾಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ನಾಮಕರಣ, ಬುಡಕಟ್ಟು ಸಾಂಸ್ಕೃತಿಕ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ನಿರೀಕ್ಷೆಗೂ ಮೀರಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಕಾರ್ಯಕ್ರಮ ಯಶಗೊಳಿಸಿದ್ದಕ್ಕೆ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ತಮ್ಮ ಕ್ಷೇತ್ರದ ಜನತೆಗೆ ಕೃತಜ್ಞತೆಗಳನ್ನು ತಿಳಿಸಿದರು. ಎಲ್ಲ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ಮಂಡಳಿ, ಸಮಿತಿಗಳು, ನಿಗಮಗಳ ಅಧ್ಯಕ್ಷರು, ರಾಯಚೂರ ಸೇರಿದಂತೆ ವಿವಿಧ ಗ್ರಾಮಗಳ ಅಧ್ಯಕ್ಷರು ಮತ್ತು ಸದಸ್ಯರಿಗೆ, ಎಲ್ಲ ಗ್ರಾಮಸ್ಥರಿಗೆ, ಅಭಿಮಾನಿಗಳಿಗೆ ಅಭಿನಂದನೆ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು