LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಮೂರು ದಿನಗಳ ಉಚಿತ ಸಾಹಿತ್ಯ ಶಿಬಿರ

ಹಾಸನ : ಕಥಾ ರಚನೆಯಲ್ಲಿ ಯೋಚನಾ ಲಹರಿಯ ಜೊತೆಗೆ ಏಕಾಗ್ರತೆ, ಸಂಯಮ ಬಹಳ ಮುಖ್ಯ ಈ ಹಿನ್ನೆಲೆಯಲ್ಲಿ ಮಕ್ಕಳು ಗಮನಹರಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು.

ಅವರು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.), ಬೆಂಗಳೂರು, ಹಾಸನ ತಾಲ್ಲೂಕು ಘಟಕದ ವತಿಯಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಸಹಯೋಗದೊಂದಿಗೆ ಸ್ಕೌಟ್ಸ್, ಗೈಡ್ಸ್ ಸಮುದಾಯಭವನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದಲ್ಲಿ ಮಾತನಾಡುತ್ತಾ ಶ್ರದ್ಧೆ, ಆಸಕ್ತಿ, ಘಟನೆಗಳನ್ನು ವಿಶ್ಲೇಷಣೆ ಮಾಡುವ ಕೌಶಲಗಳನ್ನು ಮಕ್ಕಳು ರೂಢಿಸಿಕೊಳ್ಳಬೇಕಿದೆ. ಕನ್ನಡದ ಹಿರಿಯ ಕಥೆಗಾರರ ಕಥಾ ಸಂಕಲನಗಳನ್ನು ಹೆಚ್ಚೆಚ್ಚು ಓದಬೇಕು ಅಂದಾಗ ಮಾತ್ರ ಕಥಾ ಹಂದರದ ಗುಣಲಕ್ಷಣಗಳು ಮನನವಾಗುತ್ತವೆ. ಮಕ್ಕಳು ಪ್ರತಿದಿನ ಪ್ರಾಣಾಯಾಮ ಮತ್ತು ಧ್ಯಾನ ಮಾಡುವುದರಿಂದ ಮನಸ್ಸನ್ನು ನಿಗ್ರಹ ಮಾಡಿಕೊಳ್ಳುವುದರ ಜೊತೆಗೆ ನೆನಪಿನ ಶಕ್ತಿ ಹೆಚ್ಚುತ್ತದೆ ಎಂದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಎಚ್.ಎಂ.ಪ್ರಿಯಾAಕ ಮಾತನಾಡಿ ಸಾಹಿತ್ಯ ಚಟವಟಿಕೆಗಳು ಮಕ್ಕಳನ್ನು ಸೃಜನಾತ್ಮಕವಾಗಿ ಸದೃಢಗೊಳಿಸುತ್ತವೆ. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಮ್ಮಿಕೊಂಡಿರುವ ಮಕ್ಕಳ ಕಥಾ ಕಮ್ಮಟವು ಅತ್ಯಂತ ಅರ್ಥಪೂರ್ಣವಾಗಿದೆ. ಇಂತಹ ಸುವರ್ಣ ಅವಕಾಶವನ್ನು ಮಕ್ಕಳು ಸದುಪಯೋಗಪಡಿಸಿಕೊಂಡು ಬರಹದಲ್ಲಿ ತೊಡಗಿಸಿಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್.ಉಪ್ಪಾರ್, ಕೇಂದ್ರ ಸಮಿತಿಯ ಜಂಟಿ ಕಾರ್ಯದರ್ಶಿ ನಾಗರಾಜ್ ದೊಡ್ಡಮನಿ, ಜಿಲ್ಲಾ ಮುಖ್ಯ ಆಯುಕ್ತ ಡಾ|| ವೈ.ಎಸ್.ವೀರಭದ್ರಪ್ಪ, ತಾಲ್ಲೂಕು ಅಧ್ಯಕ್ಷೆ ಕೆ.ಸಿ.ಗೀತಾ, ಮಹಿಳಾ ಕಾರ್ಯದರ್ಶಿ ಪದ್ಮಾವತಿ ವೆಂಕಟೇಶ್, ಸಮಾಜ ಸೇವಕಿ ಭಾನುಮತಿ, ಕವಯಿತ್ರಿ ಗಿರಿಜಾ ನಿರ್ವಾಣಿ, ಪೋಷಕ ರಾಮಭದ್ರಯ್ಯ, ಎ.ಎಸ್.ಒ.ಸಿ. ಪ್ರಿಯಾಂಕ ಎಚ್.ಎಂ.ಸೇರಿದಂತೆ ಶಿಬಿರಾರ್ಥಿಗಳು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನಗ್ರಾಮ ಸಹಾಯಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯ