ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದ್ದರೂ ಮಂಗಳವಾರ (ನವೆಂಬರ್ 4) ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಕೆಲವೆಡ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿಲ್ಲ. ಉತ್ತರ ಒಳನಾಡಿನ ಬೀದರ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು (ನಗರ/ಗ್ರಾಮಾಂತರ) ಜಿಲ್ಲೆಗಳ ಕೆಲವೆಡೆ ಹಗುರ ಮಳೆ ಸುರಿಯಲಿದೆ.
ನವೆಂಬರ್ 5ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ನವೆಂಬರ್ 6ರಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.