Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೊಡಗಿನಲ್ಲಿ ಕಳ್ಳಮರ ಸಾಗಣೆ ಬಯಲು – ₹28 ಲಕ್ಷ ಮೌಲ್ಯದ ಬೀಟೆ ಮರ ವಶ

ಮಡಿಕೇರಿ: ಕೊಡಗು ಜಿಲ್ಲೆಯ ವೀರಾಜಪೇಟೆ ಅರಣ್ಯ ವ್ಯಾಪ್ತಿಯಿಂದ ಅಕ್ರಮವಾಗಿ ಬೀಟೆ ಮರ ಸಾಗಣೆ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 28 ಲಕ್ಷ ರೂ. ಮೌಲ್ಯದ 45 ಬೀಟೆ ಮರದ ದಿಮ್ಮಿಗಳು ಹಾಗೂ ಸಾಗಣೆಗೆ ಬಳಸಿದ್ದ ಲಾರಿಯನ್ನು ಜಪ್ತಿ ಮಾಡಲಾಗಿದೆ.

ಈ ಪ್ರಕರಣದಲ್ಲಿ ಕೇರಳದ ಮലപ്പുറം ಮೂಲದ ಲಾರಿ ಮಾಲೀಕ ಹಾಗೂ ಚಾಲಕ ಅಬ್ದುಲ್ ಶೂಕೂರ್‌ರನ್ನು ಬಂಧಿಸಲಾಗಿದೆ. ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಅಮೂಲ್ಯ ಬೀಟೆ ಮರದ ದಿಮ್ಮಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಫಿ ಚೀಲಗಳು ಮತ್ತು ಮರದ ಹೊಟ್ಟುಗಳ ನಡುವೆ ಬೀಟೆ ಮರವನ್ನು ಅಡಗಿಸಿ ಸಾಗಣೆ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ ಬಹಿರಂಗವಾಗಿದೆ.

ಖಚಿತ ಸುಳಿವಿನ ಮೇರೆಗೆ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ಹುಣಸೂರು–ಎಚ್‌.ಡಿ.ಕೋಟೆ ಮುಖ್ಯರಸ್ತೆಯ ಆಜಾದ್ ನಗರ ಪೆಟ್ರೋಲ್ ಬಂಕ್ ಬಳಿ ಲಾರಿಯನ್ನು ತಡೆದು ತಪಾಸಣೆ ನಡೆಸಿದರು. ಈ ವೇಳೆ ಲಾರಿಯೊಳಗೆ ರಹಸ್ಯವಾಗಿ ಇಡಲಾಗಿದ್ದ ಬೀಟೆ ಮರದ ದಿಮ್ಮಿಗಳು ಪತ್ತೆಯಾಗಿವೆ.

ಅರಣ್ಯ ಇಲಾಖೆ ಅಧಿಕಾರಿಗಳು ಲಾರಿ, ಬೀಟೆ ಮರದ ದಿಮ್ಮಿಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಕೊಡಗು ಭಾಗದಿಂದ ಅಕ್ರಮವಾಗಿ ಮರ ಸಂಗ್ರಹಿಸಿ ಕರ್ನಾಟಕ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ಇದು ಸಂಘಟಿತ ಕಳ್ಳಸಾಗಣೆ ಜಾಲದ ಕೃತ್ಯವಾಗಿದ್ದು, ಇದರ ಹಿಂದೆ ಇರುವ ಪ್ರಮುಖ ಆರೋಪಿಗಳು ಮತ್ತು ಮಾಸ್ಟರ್‌ಮೈಂಡ್ ಪತ್ತೆಗೆ ತನಿಖೆ ತೀವ್ರಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ