LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಿರುಪತಿ ಲಡ್ಡು ವಿವಾದ: ಸಿಬಿಐನಿಂದ ನಾಲ್ವರ ಬಂಧನ..!

ಅಮರಾವತಿ: ತಿರುಮಲ ಶ್ರೀವರಿ ಲಡ್ಡುವಿನಲ್ಲಿ ಬಳಸುವ ತುಪ್ಪದ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ನಾಲ್ವರು ವ್ಯಕ್ತಿಗಳನ್ನು ಬಂಧಿಸಿದೆ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ಮೂಲಗಳು ತಿಳಿಸಿವೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಸಿಬಿಐ, ಈ ವಿಷಯದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಬಂಧಿತ ವ್ಯಕ್ತಿಗಳು ತಿರುಮಲ ತಿರುಪತಿ ದೇವಸ್ಥಾನಗಳಿಗೆ (ಟಿಟಿಡಿ) ತುಪ್ಪ ಪೂರೈಸುವ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ, ಇದರಲ್ಲಿ ತಮಿಳುನಾಡಿನ ಎಆರ್ ಡೈರಿ, ಉತ್ತರ ಪ್ರದೇಶದ ಪರಾಗ್ ಡೈರಿ, ಪ್ರೀಮಿಯರ್ ಅಗ್ರಿ ಫುಡ್ಸ್ ಮತ್ತು ಆಲ್ಫಾ ಮಿಲ್ಕ್ ಫುಡ್ಸ್ ಸೇರಿವೆ ಎಂದು ಟಿಡಿಪಿ ತಿಳಿಸಿದೆ. ಬಂಧಿತರನ್ನು ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೋಮಿಲ್ ಜೈನ್, ವೈಷ್ಣವಿ ಡೈರಿಯ ಅಪೂರ್ವ ಚಾವ್ಡಾ ಮತ್ತು ಎಆರ್ ಡೈರಿಯ ರಾಜು ರಾಜಶೇಖರನ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಂಧಿತರಲ್ಲಿ ಭೋಲೆ ಬಾಬಾ ಡೈರಿಯ (ರೂರ್ಕಿ, ಉತ್ತರಾಖಂಡ) ಮಾಜಿ ನಿರ್ದೇಶಕರಾದ ಬಿಪಿನ್ ಜೈನ್ ಮತ್ತು ಪೋಮಿಲ್ ಜೈನ್, ವೈಷ್ಣವಿ ಡೈರಿ (ಪೂನಂಬಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (ದುಂಡಿಗಲ್) ಎಂಡಿ ರಾಜು ರಾಜಶೇಖರನ್ ಸೇರಿದ್ದಾರೆ ಎಂದು ಟಿಡಿಪಿ ತಿಳಿಸಿದೆ. ಮೂಲಗಳ ಪ್ರಕಾರ, ತುಪ್ಪ ಪೂರೈಕೆಯ ಪ್ರತಿ ಹಂತದಲ್ಲೂ ಗಂಭೀರ ನಿಯಮ ಉಲ್ಲಂಘನೆಯು ಎಸ್​​ಐಟಿ ತನಿಖೆ ವೇಳೆ ಬಹಿರಂಗವಾಗಿದೆ. ಹೀಗಾಗಿ, ನಾಲ್ವರನ್ನು ಬಂಧಿಸಲಾಗಿದೆ. ವೈಷ್ಣವಿ ಡೈರಿ ಅಧಿಕಾರಿಗಳು ದೇವಸ್ಥಾನಕ್ಕೆ ತುಪ್ಪ ಪೂರೈಸಲು ಎಆರ್ ಡೈರಿ ಹೆಸರಿನಲ್ಲಿ ಟೆಂಡರ್‌ಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ, ಟೆಂಡರ್ ಪ್ರಕ್ರಿಯೆಯನ್ನು ತಿರುಚಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!ವಚನ.: -ಉರಿಲಿಂಗದೇವ  .!'ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ' - ಪರಿಶೀಲಿಸಲು ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ'ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ'-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ'ಸಿಎಂ ಕರೆದ ಭೋಜನ ಮೀಟಿಂಗ್‌ಗೂ, ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ' -ಪರಮೇಶ್ವರ್‌ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್ಎಲ್‌ಒಸಿಯಲ್ಲಿ ಭಯೋತ್ಪಾದಕರ ಲಾಂಚ್ ಪ್ಯಾಡ್‌ಗಳು ಸಕ್ರಿಯ; ಬಿಎಸ್‌ಎಫ್ ಕಟ್ಟೆಚ್ಚರಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್: ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ