Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾಂಗ್ರೆಸ್‌ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಶಮನಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಅವರು ಹೊಸ ತಂತ್ರ ರೂಪಿಸಿದ್ದಾರೆ. ಪಕ್ಷದೊಳಗಿನ ಭಿನ್ನಮತ ಶಮನಗೊಳಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಯ ಶಾಸಕರೊಂದಿಗೆ ನಿಯಮಿತವಾಗಿ
ಉಪಾಹಾರ ಸಭೆನಡೆಸಿ, ಅವರ ಕುಂದುಕೊರತೆಗಳನ್ನು ಆಲಿಸಲು ಸಿಎಂ ಮುಂದಾಗಿದ್ದಾರೆ.

ಸಚಿವ ಸ್ಥಾನದಿಂದ ವಂಚಿತರಾದ ನಾಯಕರಿಗೆ ನಿಗಮ-ಮಂಡಳಿಗಳಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಹಾಗೂ ಅವರ ಕ್ಷೇತ್ರಗಳಿಗೆ ಅಭಿವೃದ್ಧಿ ಅನುದಾನವನ್ನು ಸಮರ್ಪಕವಾಗಿ ಹಂಚಿಕೆ ಮಾಡುವ ಮಹತ್ವದ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎನ್ನಲಾಗಿದೆ.

ಕೋಲಾರ-ಚಿಕ್ಕಬಳ್ಳಾಪುರ ಶಾಸಕರೊಂದಿಗೆ ಸಭೆ:
ಸೋಮವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾಂಗ್ರೆಸ್ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಿದರು. ಈ ವೇಳೆ ಕ್ಷೇತ್ರದ ಅಭಿವೃದ್ಧಿ ಹಾಗೂ
'ಎತ್ತಿನಹೊಳೆ ಯೋಜನೆ'ಯ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಕೆಎಂಎಫ್ ಅಧ್ಯಕ್ಷ ಗಾದಿಗೆ ತೀವ್ರ ಪೈಪೋಟಿ: ಸಭೆಯಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಕೆ.ವೈ. ನಂಜೇಗೌಡ ಅವರು, ಈ ಹಿಂದೆ ತಮಗೆ ನೀಡಿದ್ದ ಭರವಸೆಯಂತೆ ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡಬೇಕೆಂದು ಸಿಎಂ ಅವರನ್ನು ಒತ್ತಾಯಿಸಿದರು. ಆದರೆ, ಈ ಹುದ್ದೆಯ ಮೇಲೆ ಸಿಎಂ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್‌ಮತ್ತು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ಕೂಡ ಕಣ್ಣಿಟ್ಟಿರುವುದು ತೀವ್ರ ಕುತೂಹಲ ಮೂಡಿಸಿದೆ.

ಈ ಮಹತ್ವದ ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್‌, ಶಾಸಕರಾದ ಕೆ.ವೈ. ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ, ಕೊತ್ತನೂರು ಮಂಜುನಾಥ್‌, ಪ್ರದೀಪ್‌ಈಶ್ವರ್‌, ಎಸ್.ಎನ್. ಸುಬ್ಬಾರೆಡ್ಡಿ, ಪುಟ್ಟಸ್ವಾಮಿ ಗೌಡ ಹಾಗೂ ವಿಧಾನ ಪರಿಷತ್‌ಸದಸ್ಯ ಅನಿಲ್‌ಕುಮಾರ್‌ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ