Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಭಾರತದಲ್ಲಿನ ಅಸಮಾನತೆ ಕುರಿತ ಅಧ್ಯಯನಕ್ಕೆ ಅರ್ಥಶಾಸ್ತ್ರಜ್ಞ ಜೀನ್ ಡ್ರೇಝ್‌ಗೆ ಪ್ರಶಸ್ತಿ

ಪ್ಯಾರಿಸ್, ಜೂ. 11 : ಭಾರತದಲ್ಲಿ ಬಡತನ, ಅಸಮಾನತೆ ಹಾಗೂ ಸಾಮಾಜಿಕ ಭದ್ರತೆ ಕುರಿತ ಮಹತ್ವದ ಅಧ್ಯಯನ ಮತ್ತು ಸಂಶೋಧನೆಗಾಗಿ ಅರ್ಥಶಾಸ್ತ್ರಜ್ಞ ಜೀನ್ ಡ್ರೇಝ್ ಅವರಿಗೆ ಜಾಗತಿಕ ಅಸಮಾನತೆ ಸಂಶೋಧನಾ ಪ್ರಶಸ್ತಿ ಲಭಿಸಿದೆ.

ಪ್ಯಾರಿಸ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಶುಕ್ರವಾರ ನಡೆದ ವಿಶ್ವ ಅಸಮಾನತೆ ಸಮ್ಮೇಳನದಲ್ಲಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭಾರತದಲ್ಲಿ ಬಡತನ ಮತ್ತು ಆರ್ಥಿಕ ಅಸಮಾನತೆ ಕುರಿತ ಸಂಶೋಧನೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನುಷ್ಠಾನ ಕುರಿತು ಅವರು ನಡೆಸಿದ ಅಧ್ಯಯನ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಜೀನ್ ಡ್ರೇಝ್, ಈ ಗೌರವ ತಮ್ಮೊಬ್ಬರ ಸಾಧನೆಯ ಫಲವಲ್ಲ ಎಂದು ಹೇಳಿದರು. ತಾವು ಕೈಗೊಂಡ ಪ್ರತಿಯೊಂದು ಕಾರ್ಯದ ಹಿಂದೆ ಅನೇಕ ಜನರ ಸಹಕಾರ, ಬೆಂಬಲ ಮತ್ತು ಸಾಮೂಹಿಕ ಪ್ರಯತ್ನ ಅಡಗಿದೆ ಎಂದು ಅವರು ತಿಳಿಸಿದರು.

ಭಾರತದಲ್ಲಿ ಕೇವಲ ಆರ್ಥಿಕ ಅಸಮಾನತೆ ಮಾತ್ರವಲ್ಲದೆ ಜಾತಿ, ಲಿಂಗ ಮತ್ತು ಶಿಕ್ಷಣದ ಅವಕಾಶಗಳಲ್ಲಿಯೂ ವ್ಯಾಪಕ ಅಸಮಾನತೆಗಳಿವೆ. ಆದರೆ ಇಂತಹ ಅಸಮಾನತೆಗಳ ವಿರುದ್ಧ ದೀರ್ಘಕಾಲದಿಂದ ಹೋರಾಟ ನಡೆಸಿದ ಸಮೃದ್ಧ ಇತಿಹಾಸವೂ ದೇಶಕ್ಕಿದೆ. ಅಂತಹ ಹಲವು ಚಳವಳಿಗಳೊಂದಿಗೆ ಕೆಲಸ ಮಾಡುವ ಅವಕಾಶ ದೊರೆತಿರುವುದು ತಮ್ಮ ಭಾಗ್ಯ ಎಂದು ಅವರು ಹೇಳಿದರು.

ಜಾಗತಿಕ ಮಟ್ಟದಲ್ಲಿ ಅಸಮಾನತೆಗಳ ಕುರಿತು ಅರಿವು ಮೂಡಿಸುವುದು ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ ಸಂಶೋಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ಎರಡು ವರ್ಷಗಳಿಗೊಮ್ಮೆ ನೀಡಲಾಗುತ್ತದೆ. ಇದು ಪ್ರಶಸ್ತಿಯ ಎರಡನೇ ಆವೃತ್ತಿಯಾಗಿದೆ.

ಈ ಹಿಂದೆ 2024ರಲ್ಲಿ ನಡೆದ ಮೊದಲ ಆವೃತ್ತಿಯಲ್ಲಿ ಸಾಮಾಜಿಕ ಮತ್ತು ಪರಿಸರ ಅಸಮಾನತೆಗಳ ಕುರಿತ ಅಧ್ಯಯನಕ್ಕಾಗಿ ಬಿನಾ ಅಗರ್ವಾಲ್ ಹಾಗೂ ಜೇಮ್ಸ್ ಕೆ. ಬಾಯ್ಸ್ ಅವರಿಗೆ ಜಂಟಿಯಾಗಿ ಈ ಗೌರವ ಲಭಿಸಿತ್ತು.

ಇತ್ತೀಚಿನ ವರ್ಷಗಳಲ್ಲಿ ಜೀನ್ ಡ್ರೇಝ್ ಅವರು ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ದುರ್ಬಲಗೊಳಿಸುವ ಕ್ರಮಗಳ ವಿರುದ್ಧ ಧ್ವನಿ ಎತ್ತಿದ್ದರು. ಅಲ್ಲದೆ ಆಹಾರ ಪಡಿತರ ಪಡೆಯಲು ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಿರುವ ಕ್ರಮವನ್ನೂ ಪ್ರಶ್ನಿಸಿದ್ದರು.

ಆಧಾರ್ ದೃಢೀಕರಣದ ಕೊರತೆಯನ್ನು ನೆಪವನ್ನಾಗಿ ಮಾಡಿಕೊಂಡು ಅರ್ಹ ಫಲಾನುಭವಿಗಳಿಗೆ ಆಹಾರ ಪಡಿತರ ನಿರಾಕರಿಸಲಾಗುತ್ತಿರುವ ಬಗ್ಗೆ ಅವರು ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದು, ಬಡವರ ಹಕ್ಕುಗಳ ರಕ್ಷಣೆಗೆ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ