ಇಂದು ಫೆ.5ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!
ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ವಿಜಾಪುರ ವಿದ್ಯುತ್ ವಿತರಣಾ ಕೇಂದ್ರದ ಹತ್ತಿರ ಸ್ಪನ್ ಪೋಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಫೆ.05ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿಜಾಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎನ್‍ಜೆವೈ ಮತ್ತು ಐಪಿ ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಐಪಿ ಮಾರ್ಗಗಳಿಗೆ ಬೆಳಿಗ್ಗೆ 10 ಗಂಟೆಯೊಳಗೆ ವಿದ್ಯುತ್ ಸರಬರಾಜು ಮಾಡಲಾಗುವುದು.
ಚಿತ್ರದುರ್ಗ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯ ವಿಜಾಪುರ, ಲಕ್ಷ್ಮೀಸಾಗರ, ಎನ್.ಬಳ್ಳೆಕಟ್ಟೆ, ಹಿರೆಕಬ್ಬಿಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.