ಇಂದಿನ ವಚನ: -ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಸತ್ಯ ಸದಾಚಾರ ಸಮ್ಯಜ್ಞಾನವೆಂಬುವು ಮೂರು.
ನಾಮವೊಂದೇ ರೂಪವೊಂದೇ ಕ್ರೀವೊಂದೇ
ಕಾಯವೊಂದೇ ಕರಣವೊಂದೇ ಆತ್ಮವೊಂದೇ ಪರಮಾತ್ಮವೊಂದೇ
ನೀರು ಗಟ್ಟಿಗೊಂಡ ಆಣೆಕಲ್ಲು ನೀರೇ ಆಯಿತಲ್ಲದೇ ಕಲ್ಲಾಗಲಿಲ್ಲಾ.
ಇದರಂತೆ ಶರಣ ಒಳಹೊರಗೆಂಬ ಸಂಶಯ ಅಳಿದು
ಸರ್ವವೂ ತಾನೆಂಬ ಸತ್ಯವೇ ಸತ್ಯವಾಗಿಹನು.
ಇದೇ ಸತ್ಯ ಸತ್ಯವೆಂದು ಮಹತ್ವ ತೋರಿದರೆ ಸತ್ಯವೇ ಅಲ್ಲಾ,
ಆ ಮಹತ್ವವು ತನಗನ್ಯವೇನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ ?
-ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.