LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ

ಬೆಂಗಳೂರು: ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025ರ ಹಿನ್ನೆಲೆ ಫೆ.5ರಿಂದ ಫೆ.14ರವರೆಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರತಿದಿನ ಕೆಲವು ಗಂಟೆಗಳ ಕಾಲ ವಿಮಾನ ಹಾರಾಟ ಸ್ಥಗಿತವಾಗಲಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಮುಚ್ಚಲ್ಪಡಲಿದ್ದು, ಪ್ರಯಾಣಿಕರು ವಿಮಾನ ವೇಳಾಪಟ್ಟಿಗಳ ಪರಿಷ್ಕೃತ ಅಥವಾ ನವೀಕರಿಸಿದ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ವಿಮಾನ ವೇಳಾಪಟ್ಟಿಯ ನವೀಕೃತ ಮಾಹಿತಿಗೆ ಅನುಸಾರವಾಗಿ ತಮ್ಮ ಆಗಮನ ಮತ್ತು ನಿರ್ಗಮನವನ್ನು ಯೋಜಿಸಲು ನಾವು ವಿನಂತಿ ಮಾಡುತ್ತೇವೆ. ನಿಮ್ಮ ತಾಳ್ಮೆ ಮತ್ತು ಸಹಕಾರಕ್ಕಾಗಿ ಧನ್ಯವಾದಗಳು ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಕಟಣೆ ಹೊರಡಿಸಿದೆ.ಬೆಂಗಳೂರು ಏರ್‌ಪೋರ್ಟ್ ಕಾರ್ಯಾಚರಣೆಯು ಫೆ.5ರಿಂದ ಫೆ.15ರವರೆಗೆ 10 ದಿನಗಳಲ್ಲಿ ಬೇರೆಬೇರೆ ಸಮಯದಲ್ಲಿ ಬಂದ್ ಆಗಿರಲಿದೆ.

ಆ ವೇಳಾಪಟ್ಟಿ ವಿವರ ಈ ಕೆಳಗೆ ನೀಡಲಾಗಿದೆ. ಫೆ. 5: ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ, ಅಪರಾಹ್ನ 3 ರಿಂದ ಸಂಜೆ 4:30ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆ. 6: ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಅಪರಾಹ್ನ 3 ರಿಂದ ಸಂಜೆ 4:39ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆ. 7: ಬೆಳಗ್ಗೆ 09ರಿಂದ 11 ರವರೆಗೆ ಮತ್ತು ಅಪರಾಹ್ನ 3 ರಿಂದ ಸಂಜೆ 4:30ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆ. 8: ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಅಪರಾಹ್ನ 3 ರಿಂದ ಸಂಜೆ 4:30ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆ. 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆ. 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಅಪರಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆ.11-12: ಮಧ್ಯಾಹ್ನ 12:00 ರಿಂದ ಅಪರಾಹ್ನ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆ. 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಅಪರಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯಐಪಿಎಸ್ ಅಧಿಕಾರಿ ಪೂರ್ವಾ ಚೌಧರಿ ಯಶೋಗಾಥೆ..!!