LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ 26ನೇ ಘಟಿಕೋತ್ಸವ

ಬೆಂಗಳೂರು:ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 26ನೇ ವಾರ್ಷಿಕ ಘಟಕೋತ್ಸವವು ನಿಮ್ಹಾನ್ಸ್ ಕನ್ವೆನ್ನನ್ ಸೆಂಟರ್ ನಲ್ಲಿ ನಾಳೆ ನಡೆಯಲಿದೆ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ನಾನ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ ಎಂದು ವಿವಿಯ ಕುಲಪತಿ ರಮೇಶ್ ತಿಳಿಸಿದರು

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಯಕರಮಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಗೌರವಾನ್ವಿತ ಥಾವರ್‌ಚಂದ್ ಗೆಹೋಟ್ ರವರು ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಗೌರವಾನ್ವಿತ ಡಾ.ಬಿ.ಎನ್.ಗಂಗಾಧರ್, ಅಧ್ಯಕ್ಷರು, ರಾಷ್ಟ್ರೀಯ ವೈದ್ಯಕೀಯ ಆಯೋಗ, ನವದೆಹಲಿ, ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ) ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಚಿವರು, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ, ಕರ್ನಾಟಕ ಸರ್ಕಾರ ಹಾಗೂ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಆದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ರವರು ಉಪಸ್ಥಿತರಿರುವರು.

ಡಾ.ಜಿ. ಕೆ. ವೆಂಕಟೇಶ್, ಡಾ.ಪಿ. ಎಂ. ಬಿರಾದಾರ್ ಮತ್ತು ಡಾ.ಪಿಂಕಿ ಭಾಟಿಯಾ ಟೋಪಿವಾಲಾ ಇವರುಗಳಿಗೆ 26ನೇ ಘಟಿಕೋತ್ಸವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪದವಿ "ಡಾಕ್ಟರ್ ಆಫ್ ಸೈನ್ಸ್" ಪ್ರದಾನ ಮಾಡಲಾಗುವುದು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 26ನೇ ವಾರ್ಷಿಕ ಘಟಿಕೋತ್ಸವದಲ್ಲಿ. ವಿವಿಧ ವಿಷಯಗಳಲ್ಲಿ 52,650 ಅಭ್ಯರ್ಥಿಗಳು ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಅವರ ಪೈಕಿ 17 ಪಿ.ಹೆಚ್.ಡಿ. 156 ಸೂಪರ್ ಸ್ಪೆಷಾಲಿಟಿ, 7,815 ಸ್ನಾತಕೋತ್ತರ ಪದವಿ, 07 ಸ್ನಾತಕೋತ್ತರ ಡಿಪ್ಲೊಮಾ ಪದವಿ. 122 ಫೆಲೋಷಿಪ್ ಕೋರ್ಸ್, 08 ಸರ್ಟಿಫಿಕೇಟ್ ಕೋರ್ಸ್ ಹಾಗೂ 44,525 ಸ್ನಾತಕ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ವಿಶ್ವವಿದ್ಯಾಲಯದ ಎಲ್ಲಾ ನಿಖಾಯಗಳ ಒಟ್ಟು ವಿದ್ಯಾರ್ಥಿಗಳ ಒಟ್ಟಾರೆ ಫಲಿತಾಂಶ ಪ್ರತಿಶತ 82.43% ಆಗಿರುತ್ತದೆ ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳು