LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ?

ಬೆಂಗಳೂರು : ಮಂಗಳವಾರ ಬಂಟ್ವಾಳದಲ್ಲಿ ನಡೆದ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಡೆದಿರುವ ಮೂರು ಕೊಲೆಗಳು ಹಾಗೂ ಆಗಾಗ ಸಂಭವಿಸುತ್ತಿರುವ ಕೋಮು ಹಿಂಸಾಚಾರ ಸಂಬಂಧಿ ಘಟನೆಗಳನ್ನು ತಡೆಯಲು ವಿಫಲವಾಗಿರುವ ಪೊಲೀಸ್‌ ಇಲಾಖೆಯ ವಿರುದ್ಧ ಭಾರಿ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೆಲವು ಉನ್ನತ ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಕರಾವಳಿಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಉನ್ನತ ಅಧಿಕಾರಿಗಳನ್ನು ಬದಲಾಯಿಸಿ ಅಲ್ಲಿಗೆ ಕೆಲವು ದಕ್ಷ ಮತ್ತು ಖಡಕ್‌ ಆಧಿಕಾರಿಗಳನ್ನು ನೇಮಿಸಬೇಕು ಎಂಬ ವಿಚಾರ ಪ್ರಸ್ತಾಪವಾಗಿದೆ ಎಂದು ಮೂಲಗಳು ತಿಳಿಸಿವೆ.



ಸದ್ಯದಲ್ಲೇ ಸಚಿವ ಸಂಪುಟ ಪುನರ್‌ ರಚನೆಯಾಗುವ ಸಾಧ್ಯತೆಯಿದ್ದು, ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನಮಾನ ನೀಡುವ ವಿಚಾರವನ್ನು ಚರ್ಚಿಸಲು ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಅವರ ಮನೆಗೆ ಹೋಗಿದ್ದರೂ ಈ ಸಂದರ್ಭದಲ್ಲಿ ಪ್ರಮುಖವಾಗಿ ಕರಾವಳಿಯ ಸರಣಿ ಕೊಲೆಗಳು ಮತ್ತು ಕೋಮು ಹಿಂಸಾಚಾರ ವಿಚಾರವೇ ಚರ್ಚೆಯಾಗಿದೆ. ಹರಿಪ್ರಸಾದ್‌ ಕರಾವಳಿಯವರೇ ಆಗಿದ್ದು, ಇಲ್ಲಿನ ಪರಿಸ್ಥಿತಿಯನ್ನು ಸುಧಾರಿಸಲು ಮುಖ್ಯಮಂತ್ರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು, ಹಿಂಸೆಯ ಘಟನೆಗಳು, ಪ್ರಚೋದನಕಾರಿ ಭಾಷಣಗಳು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಇತ್ಯಾದಿಗಳ ಬಗ್ಗೆ ಇಬ್ಬರ ನಡುವೆ ಗಂಭೀರ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರಕ್ಕೆ ತಕ್ಷಣ ಕಡಿವಾಣ ಹಾಕಲು ಹಾಗೂ ಅಲ್ಲಿನ ಪೊಲೀಸ್ ವ್ಯವಸ್ಥೆಗೆ ಕಾಯಕಲ್ಪ ನೀಡಲು ಏನು ಮಾಡಬಹುದು ಎಂಬ ಬಗ್ಗೆ ಮುಖ್ಯಮಂತ್ರಿಗಳು ಬಿ.ಕೆ ಹರಿಪ್ರಸಾದ್ ಅವರ ಸಲಹೆ ಪಡೆದಿದ್ದಾರೆ.

ತಕ್ಷಣದ ಕ್ರಮವಾಗಿ ಜಿಲ್ಲೆಯ ಎಸ್ಪಿ ಹಾಗೂ ಮಂಗಳೂರಿನ ಪೊಲೀಸ್ ಕಮಿಷನರ್ ಇಬ್ಬರನ್ನೂ ತಕ್ಷಣ ಬದಲಾಯಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಎಂದು ತಿಳಿದು ಬಂದಿದೆ. ಜಿಲ್ಲೆಯ ಪೊಲೀಸ್ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸಲು ಏನು ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026