Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ:

ಚಂದ್ರವಳ್ಳಿ ನ್ಯೂಸ್ ​ನವದೆಹಲಿ:
NEET ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಸುದೀರ್ಘ ಆಂದೋಲನದ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ದೌರ್ಜನ್ಯವನ್ನು ಖಂಡಿಸಿ ವಿರೋಧ ಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಯ ನಡುವೆಯೇ, ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳು (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ - 2026’ ಅನ್ನು ಮಂಡಿಸಿದೆ. 

​ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಈ ಮಸೂದೆಯನ್ನು ಸದನದಲ್ಲಿ ಮಂಡಿಸಿದರು. ವಿಪಕ್ಷಗಳ ನಾಯಕರು ಜುಲೈ 20 ರಂದು ಸಂಸತ್ತಿಗೆ ನಡೆದ ಪ್ರತಿಭಟನಾ ಮೆರವಣಿಗೆಯ ಸಮಯದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿರುದ್ಧ ಸರ್ಕಾರದ ಪ್ರತಿಕ್ರಿಯೆಗೆ ಪಟ್ಟು ಹಿಡಿದು ನಿರಂತರವಾಗಿ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು. 

​​೨ ವರ್ಷ ಹಳೆಯ ಕಾಯ್ದೆಗೆ ತಿದ್ದುಪಡಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಾಲು ಸಾಲು ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ವ್ಯಾಪಕ ಪ್ರತಿಭಟನೆಯ ನಂತರ, 2 ವರ್ಷಗಳಷ್ಟು ಹಳೆಯದಾದ ಪ್ರಶ್ನೆ ಪತ್ರಿಕೆ ಸೋರಿಕೆ ನಿಗ್ರಹ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಲು ಈ ತಿದ್ದುಪಡಿ ಮಸೂದೆಯನ್ನು ತರಲಾಗಿದೆ. 

​ತನಿಖೆಗೆ ಗಡುವು: ಹೊಸ ಮಸೂದೆಯ ಪ್ರಕಾರ, ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಯನ್ನು ಎರಡು ತಿಂಗಳ ಒಳಗಾಗಿ ಪೂರ್ಣಗೊಳಿಸುವುದನ್ನು ಕಡ್ಡಾಯಗೊಳಿಸಲಾಗಿದೆ. 

​ತ್ವರಿತ ನ್ಯಾಯಾಲಯಗಳ ಸ್ಥಾಪನೆ: ಪ್ರಕರಣದ ಆರೋಪಿಗಳ ವಿಚಾರಣೆಯನ್ನು ವಿಳಂಬವಿಲ್ಲದೆ ನಡೆಸಲು ಪ್ರತಿಯೊಂದು ರಾಜ್ಯದಲ್ಲೂ ಪ್ರತ್ಯೇಕ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಪ್ರಸ್ತಾಪಿಸಲಾಗಿದೆ. 

​ಕಠಿಣ ಶಿಕ್ಷೆ ಮತ್ತು ದಂಡ: ಪರೀಕ್ಷಾ ಪಾವಿತ್ರ್ಯತೆಯನ್ನು ಕಾಯ್ದುಕೊಳ್ಳಲು ಅಕ್ರಮ ಎಸಗುವವರ ವಿರುದ್ಧ ಶಿಕ್ಷೆಯ ಪ್ರಮಾಣ ಹಾಗೂ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ.

​ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವ ಜಾಲಗಳಿಗೆ ಕಡಿವಾಣ ಹಾಕಿ, ದೇಶದ ಸ್ಪರ್ಧಾತ್ಮಕ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದು ಈ ಮಸೂದೆಯ ಮುಖ್ಯ ಉದ್ದೇಶವಾಗಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ